ಬೆಳಗಾವಿ | ಯಳ್ಳೂರು ಫಲಕ ವಿವಾದ ಪ್ರಕರಣ: ಎಲ್ಲಾ ಆರೋಪಿಗಳು ನಿರ್ದೋಷಿ

Date:

ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಸುಮಾರು 12 ವರ್ಷಗಳ ಹಿಂದೆ ನಡೆದ ‘ಮಹಾರಾಷ್ಟ್ರ ರಾಜ್ಯ ಯಳ್ಳೂರು’ ಫಲಕ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ನ್ಯಾಯಾಲಯವು ನಿರ್ದೋಷಿ ಎಂದು ಘೋಷಿಸಿದೆ.

- Advertisement -

2014ರ ಜುಲೈ 27ರಂದು ಯಳ್ಳೂರಿನ ಗ್ರಾಮ ಸರಹದ್ದು ಗುರುತಿಸುವ ಫಲಕದ ಮೇಲೆ ‘ಯಳ್ಳೂರು, ಮಹಾರಾಷ್ಟ್ರ ರಾಜ್ಯ’ ಎಂದು ಬರೆಯಲಾಗಿತ್ತು. ಈ ಘಟನೆಗೆ ಆಕ್ರೋಶಗೊಂಡ ಕನ್ನಡಿಗರ ದೊಡ್ಡ ಗುಂಪು ಗ್ರಾಮಕ್ಕೆ ನುಗ್ಗಿ ಫಲಕವನ್ನು ಕಿತ್ತು ಹಾಕಿತ್ತು. ಈ ವೇಳೆ ಫಲಕ ಹಾಕಿದವರೂ ಪ್ರತಿರೋಧ ತೋರಿದ ಪರಿಣಾಮ, ಎರಡೂ ಗುಂಪುಗಳ ನಡುವೆ ಭಾರೀ ಗಲಭೆ, ಹೊಡೆದಾಟ ಹಾಗೂ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಘಟನೆ ಬಳಿಕ ಪೊಲೀಸರು ಗ್ರಾಮದ 50 ಮಂದಿಯನ್ನು ಆರೋಪಿಗಳೆಂದು ಗುರುತಿಸಿ ಒಟ್ಟು ಏಳು ಪ್ರಕರಣಗಳನ್ನು ದಾಖಲಿಸಿದ್ದರು. ಇದರಲ್ಲಿ ಐದು ಪ್ರಕರಣಗಳಲ್ಲಿ ಆರೋಪಿಗಳು ಈಗಾಗಲೇ ಖುಲಾಸೆಯಾಗಿದ್ದರು. ಬುಧವಾರ ಹೊರಬಂದ ತೀರ್ಪಿನಲ್ಲಿ ಉಳಿದ ಎರಡು ಪ್ರಕರಣಗಳಲ್ಲೂ ಆರೋಪಿಗಳು ನಿರ್ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಪ್ರಕರಣದಲ್ಲಿ ಆರೋಪಿಗಳ ಪರವಾಗಿ ವಕೀಲರಾದ ಶ್ಯಾಮಸುಂದ‌ರ್ ಪತ್ತಾ‌ರ್, ಶ್ಯಾಮ್‌ ಪಾಟೀಲ ಹಾಗೂ ಹೇಮರಾಜ್ ಬೆಂಚನ್ನವರ ವಾದ ಮಂಡಿಸಿದರು. ಈ ಪ್ರಕರಣದಲ್ಲಿದ್ದ ಮೂವರು ಆರೋಪಿಗಳು ಈಗಾಗಲೇ ನಿಧನರಾಗಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...