ಬೆಳಗಾವಿ | ಪ್ರಿಯಕರನ ಜೊತೆ ಓಡಿಹೋದ ಯುವತಿಗೆ ವಿಷ ನೀಡಿ ಕೊಲೆ; ಸಂಬಂಧಿಕರೇ ಆರೋಪಿ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಪ್ರಿಯಕರನೊಂದಿಗೆ ಓಡಿಹೋದ ಹಿನ್ನೆಲೆಯಲ್ಲಿ ಯುವತಿಯನ್ನು ಸಂಬಂಧಿಕರೇ ವಿಷ ನೀಡಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಸತ್ಯವ್ವ ಎಂಬ ಯುವತಿ ಫೆಬ್ರವರಿ 17ರಂದು ತನ್ನ ಪ್ರಿಯಕರ ಕೃಷ್ಣ ಪಾಟೀಲ್‌ ಜೊತೆ ಮನೆಬಿಟ್ಟು ಓಡಿ ಹೋಗಿದ್ದಳು. ನಂತರ ಇಬ್ಬರೂ ಸೌದತ್ತಿ ತಾಲೂಕಿನ ಬೆಳವಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸುಮಾರು 15 ದಿನಗಳ ಬಳಿಕ ಕುಟುಂಬಸ್ಥರು ಇಬ್ಬರನ್ನೂ ಕರೆತಂದು ರಾಜಿ ಸಂಧಾನ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದಾದ ಬಳಿಕ ಸತ್ಯವ್ವಳ ಅಣ್ಣ ಶಾನೂರ ಆಕೆಯನ್ನು ಮಹಾರಾಷ್ಟ್ರದ ಶಿರೋಳದಲ್ಲಿರುವ ಅಕ್ಕನ ಮನೆಗೆ ಕಳುಹಿಸಿದ್ದನು. ಈ ವೇಳೆ ಪ್ರಿಯಕರನನ್ನು ಮರೆತು ಬಿಡುವಂತೆ ಕುಟುಂಬಸ್ಥರು ಒತ್ತಡ ಹೇರಿದ್ದರು. ಆದರೆ ಇದಕ್ಕೆ ಆಕೆ ಒಪ್ಪದ ಹಿನ್ನೆಲೆಯಲ್ಲಿ ಕೊಲೆ ಮಾಡಲು ಸಂಚು ರೂಪಿಸಲಾಗಿದೆ.

ಮಾರ್ಚ್ 21ರಂದು ಅರಗ ಗ್ರಾಮಕ್ಕೆ ಕರೆದುಕೊಂಡು ಬಂದು ಸತ್ಯವ್ವಳಿಗೆ ವಿಷ ಕುಡಿಸಿ ಹತ್ಯೆಗೈದಿದ್ದಾರೆ. ಬಳಿಕ ಸಾಕ್ಷಿ ನಾಶಪಡಿಸಲು ಶವವನ್ನು ಹಾಸಿಗೆ ಬಟ್ಟೆ ಸಮೇತ ಸುಟ್ಟು ಹಾಕಲಾಗಿದೆ. ಶವವನ್ನು ಮಹಾರಾಷ್ಟ್ರದಲ್ಲೇ ಸುಟ್ಟು ಆರೋಪಿಗಳು ಊರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಸತ್ಯವ್ವ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಪ್ರಿಯಕರ ಕೃಷ್ಣ ಪಾಟೀಲ್‌ ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ದೂರಿನ ಮೇರೆಗೆ ಸಿಪಿಐ ಜಾವೇದ್‌ ಮುಶಪೂರಿ ತನಿಖೆ ಕೈಗೊಂಡು, ಶಾನೂರನನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬಹಿರಂಗವಾಗಿದೆ. “ತಂಗಿ ಕುಟುಂಬದ ಮರ್ಯಾದೆ ಹಾಳುಮಾಡಿದ್ದಾಳೆ” ಎಂಬ ಕಾರಣ ನೀಡಿ ಕೊಲೆಗೈದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ಪ್ರಕರಣ ಸಂಬಂಧ ಶಾನೂರ, ಪ್ರಕಾಶ ಮತ್ತು ಕಲ್ಲಪ್ಪರನ್ನು ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರೆದಿದೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಬೆಳಗಾವಿ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...