ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ: ಮೃತದೇಹ ತರಲು ಕುಟುಂಬದ ಮನವಿ

Date:

ದುಡಿಮೆಗಾಗಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರದ ಯುವಕನೊಬ್ಬ ಅಲ್ಲಿಯೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

- Advertisement -

ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್‌ ಮೋಮಿನ್ (25) ಮೃತ ಯುವಕ. ಕೆಲ ತಿಂಗಳ ಹಿಂದೆ ಉದ್ಯೋಗ ಅರಸಿ ನೇಪಾಳಕ್ಕೆ ತೆರಳಿದ್ದ ಸಾಹಿಲ್, ಅಲ್ಲಿನ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಆತ ತಂಗಿದ್ದ ಕೋಣೆಯಲ್ಲೇ ರೂಮ್‌ಮೇಟ್ ಅಮಾನುಷವಾಗಿ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮಗನ ಅಕಾಲಿಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಖಾನಾಪುರದಲ್ಲಿರುವ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಬದುಕು ಕಟ್ಟಿಕೊಳ್ಳಲು ವಿದೇಶಕ್ಕೆ ತೆರಳಿದ್ದ ಮಗ ಶವವಾಗಿ ಮರಳುತ್ತಿರುವ ಸುದ್ದಿ ಪೋಷಕರನ್ನು ಕಂಗಾಲಾಗಿಸಿದ್ದು, ಊರಿನ ಜನರ ಕಣ್ಣಲ್ಲೂ ನೀರು ತರಿಸಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಗಂಡನ ಮನೆಯವರ ಕಿರುಕುಳ: 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ

ಸಾಹಿಲ್‌ನ ಮೃತದೇಹವನ್ನು ಶೀಘ್ರ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ, ವಿದೇಶಾಂಗ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ. ಸ್ಥಳೀಯ ಆಡಳಿತ ಹಾಗೂ ಪೊಲೀಸ್‌ ಇಲಾಖೆಯ ಮೂಲಕವೂ ಅಗತ್ಯ ಪ್ರಕ್ರಿಯೆಗಳು ನಡೆಯುತ್ತಿದ್ದು, ಸರ್ಕಾರ ಮಾನವೀಯ ನೆಲೆಯಲ್ಲಿ ಸ್ಪಂದಿಸಿ ಮೃತದೇಹವನ್ನು ಶೀಘ್ರ ತಾಮ್ನಾಡಿಗೆ ತಲುಪಿಸುವಂತೆ ಕುಟುಂಬದವರು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...