ಬೆಳಗಾವಿ | ಕಲ್ಲಿನಿಂದ ತಲೆ ಚಚ್ಚಿ ಯುವಕ ಹತ್ಯೆ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

- Advertisement -

ಐನಾಪುರ ಪಟ್ಟಣದ ಸಂತೋಷ ಸಿದ್ದಪ್ಪ ಕಮತೆ (33) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷನ ಸ್ನೇಹಿತರಾದ ಬಾಹುಬಲಿ ಭೋಸಲೆ (28) ಹಾಗೂ ಶ್ರೀಸೈಲ್ ಮಡಿವಾಳರ (31) ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಂತೋಷ ಕಮತೆ ತಮ್ಮ ತೋಟದಲ್ಲಿದ್ದ ತೆಂಗಿನಕಾಯಿಗಳನ್ನು ಇಬ್ಬರು ಸ್ನೇಹಿತರೊಂದಿಗೆ ಉಗಾರ ಪಟ್ಟಣಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡಿದ್ದರು. ಬಳಿಕ ಮೂವರು ಸೇರಿ ಮದ್ಯಪಾನ ಮಾಡಿದ್ದು, ಐನಾಪುರಕ್ಕೆ ಹಿಂದಿರುಗುವ ವೇಳೆ ಮಾರಾಟವಾದ ಹಣದ ಹಂಚಿಕೆ ವಿಚಾರವಾಗಿ ವಾಗ್ವಾದ ಶುರುವಾಗಿದೆ ಎನ್ನಲಾಗಿದೆ.

ವಾದ ತಾರಕಕ್ಕೇರಿದ ವೇಳೆ ಇಬ್ಬರು ಆರೋಪಿಗಳು ಸಂತೋಷನ ತಲೆಗೆ ಕಲ್ಲಿನಿಂದ ಬಲವಾಗಿ ಹೊಡೆದಿದ್ದಾರೆ. ತೀವ್ರವಾಗಿ ಗಾಯಗೊಂಡ ಸಂತೋಷ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಥಣಿ ಡಿವೈಎಸ್‌ಪಿ ಪ್ರಶಾಂತ್‌ ಮುನ್ನೋಳಿ, ಸಿಪಿಐ ಸಂತೋಷ ಹಳ್ಳೂರ ಹಾಗೂ ಪಿಎಸ್‌ಐ ರಾಘವೇಂದ್ರ ಖೋತ್‌ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...

ಬೆಳಗಾವಿ : ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೇಯರ್, ಉಪಮೇಯರ್ ಬೇಡ: ಸಭೆಯಲ್ಲಿ ಗದ್ದಲ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ...