ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

Date:

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ ಜಾತಿವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

- Advertisement -

ಈ ಬಾರಿ ಒಟ್ಟು 90 ಸ್ಥಾನಗಳ ಪೈಕಿ ಶೇ.50ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. 45 ಸ್ಥಾನಗಳು ಮಹಿಳೆಯರಿಗೆ ಹಾಗೂ 45 ಸ್ಥಾನಗಳು ಪುರುಷರಿಗೆ ಹಂಚಿಕೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಪುರುಷರ 45 ಸ್ಥಾನಗಳ ಪೈಕಿ ಅನುಸೂಚಿತ ಜಾತಿಗೆ 11, ಅನುಸೂಚಿತ ಪಂಗಡಕ್ಕೆ 7, ಹಿಂದುಳಿದ ವರ್ಗ-ಎಗೆ 22 ಹಾಗೂ ಹಿಂದುಳಿದ ವರ್ಗ-ಬಿಗೆ 5 ಸ್ಥಾನಗಳನ್ನು ಮೀಸಲಿಡಲಾಗಿದೆ.

ಮಹಿಳೆಯರ 45 ಸ್ಥಾನಗಳ ಪೈಕಿ ಅನುಸೂಚಿತ ಜಾತಿಗೆ 6, ಅನುಸೂಚಿತ ಪಂಗಡಕ್ಕೆ 4, ಹಿಂದುಳಿದ ವರ್ಗ-ಎಗೆ 11, ಹಿಂದುಳಿದ ವರ್ಗ-ಬಿಗೆ 3 ಹಾಗೂ ಸಾಮಾನ್ಯ ವರ್ಗಕ್ಕೆ 21 ಸ್ಥಾನಗಳನ್ನು ಮೀಸಲಿಡಲಾಗಿದೆ.

ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದ ಆಕಾಂಕ್ಷಿಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ತಮ್ಮ ಕ್ಷೇತ್ರದ ಮೀಸಲಾತಿ ಯಾವ ವರ್ಗಕ್ಕೆ ಬಂದಿದೆ ಎಂಬುದನ್ನು ಪರಿಶೀಲಿಸುತ್ತಿರುವ ಆಕಾಂಕ್ಷಿಗಳು, ಪಕ್ಷದ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ.

ಮಹಿಳಾ ಮೀಸಲಾತಿಯಿಂದ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಸಿಗುವ ನಿರೀಕ್ಷೆ ಮೂಡಿದ್ದು, ಈಗಾಗಲೇ ಚುನಾವಣಾ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದ ಕೆಲ ಆಕಾಂಕ್ಷಿಗಳ ಲೆಕ್ಕಾಚಾರವೂ ಬದಲಾಗುವಂತಾಗಿದೆ. ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಸಂಖ್ಯೆ, ಕ್ಷೇತ್ರವಾರು ಸಾಮಾಜಿಕ ಸಮೀಕರಣ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆಗಳು ಜೋರಾಗಿವೆ.

ಮೀಸಲಾತಿ ಪ್ರಕಟಣೆಯೊಂದಿಗೆ ಜಿಪಂ ಚುನಾವಣೆಯ ಕಾವು ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರವಾರು ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...