ಬೆಳಗಾವಿ | ಕಾಲುವೆಗೆ ಬಸ್‌ ಪಲ್ಟಿ; ಪ್ರಯಾಣಿಕರಿಗೆ ಗಾಯ

Date:

ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಬದಿಯ ಕಾಲುವೆಗೆ ಬಿದ್ದಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾನಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಗಳತಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಎದುರಿನಿಂದ ವೇಗವಾಗಿ ಬಂದ ಬೈಕ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಬಸ್‌ ಚಾಲಕ ಬಸ್‌ಅನ್ನು ಪಕ್ಕಕ್ಕೆ ತಿರುಗಿಸಿದ್ದಾರೆ. ಈ ವೇಳೆ, ನಿಯಂತ್ರಣ ತಪ್ಪಿದ ಬಸ್‌ ಕಾಲುವೆಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಇಂಚಲಕರಂಜಿಯಿಂದ ನಿಪ್ಪಾಣಿಗೆ ಬರುತ್ತಿದ್ದ ಬಸ್‌ ಕಾಲುವೆಗೆ ಬಿದ್ದಿದೆ. ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು. ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ನಿಪ್ಪಾಣಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಸ್‌ ಸವಾರನ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸದಲಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...