ಕರ್ನಾಟಕಕ್ಕೆ 50ರ ಸಂಭ್ರಮ | ಕೆಂಪು-ಹಳದಿಯಿಂದ ಕಂಗೊಳಿಸುತ್ತಿದೆ ಬೆಳಗಾವಿ

Date:

ಮೈಸೂರು ರಾಜ್ಯ ಕರ್ನಾಟಕವಾಗಿ ಇಂದಿನ 50 ವರ್ಷ ಪೂರೈಸಿದೆ. ರಾಜ್ಯಾದ್ಯಂತ 50ರ ಸಂಭ್ರಮ ಮನೆ ಮಾಡಿದೆ. ಮಹಾರಾಷ್ಟ್ರದೊಂದಿಗೆ ಗಡಿ ವಿವಾದಹೊಂದಿರುವ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಕನ್ನಡ ಬಾವುಟಗಳು ಹಾರಾಡುತ್ತಿವೆ. ಬೆಳಗಾವಿ ನಗರ ಅಕ್ಷರಶಃ ಕೆಂಪು-ಹಳದಿ ಬಣ್ಣಗಳಿಂದ ಕಂಗೊಳಿಸುತ್ತಿದೆ.

- Advertisement -

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕನ್ನಡ ಹಬ್ಬದ ಮೆರಗು ಹೆಚ್ಚಿದೆ. ನಗರದಲ್ಲಿ ಇಡೀ ದಿನ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆಯಲಿದೆ. 100 ರೂಪಕ ವಾಹನಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಹಳದಿ-ಕೆಂಪು ಬಣ್ಣದ ಗಾಳಿಪಟ ಉತ್ಸವವೂ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಲು ಮುಂದಾಗಿದೆ. ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಮಹಾರಾಷ್ಟ್ರ ರಾಜಕೀಯ ನಾಯಕರಿಗೆ ಬೆಳಗಾವಿ ಪ್ರವೇಶಿಸದಂತೆ ನಿರ್ಬಂಧ ಹೇಳಿದೆ. ಜಿಲ್ಲೆಯ ಗಡಿ ಭಾಗದಲ್ಲಿ 18 ಚೆಕ್​ಪೋಸ್ಟ್​​ಗಳ ನಿರ್ಮಾಣ ಮಾಡಲಾಗಿದೆ.

ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಇಬ್ಬರು ಡಿಸಿಪಿ, 12 ಡಿವೈಎಸ್‌ಪಿ, 120ಕ್ಕೂ ಹೆಚ್ಚು ಇನ್ಸ್​ಪೆಕ್ಟರ್ಸ್​, 300 ಪಿಎಸ್‌ಐ, 2000 ಪಿಸಿ, 500 ಹೋಮ್​ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಬೆಳಗಾವಿ ನಗರದ ಹಲವೆಡೆ 300 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...