ಚಿತ್ರದುರ್ಗ | ಅಧಿವೇಶನದಲ್ಲಿ ಚಳ್ಳಕೆರೆ ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸ್ವೀಕೃತ: ಸತೀಶ್ ಜಾರಕಿಹೊಳಿ

Date:

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸೇತುವೆಗಳ ನಿರ್ಮಾಣಕ್ಕೆ ಕ್ರಮವಹಿಸಿದ್ದು, ರೂ.46.5 ಕೋಟಿ ವೆಚ್ಚದ ಸೇತುವೆಗಳಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದು, ಹೊಸ ಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಕ್ರಮಕೈಗೊಳ್ಳಲಾಗುವುದು ಎಂದು ಅಧಿವೇಶನದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

- Advertisement -

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ನಿಯಮ-73ರ ಅಡಿಯಲ್ಲಿ ಗಮನ ಸೆಳೆಯುವ ಸೂಚನೆ ಕುರಿತು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಉತ್ತರಿಸಿ, “ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-150ಎ ವ್ಯಾಪ್ತಿಯಲ್ಲಿ ಓಬಳಾಪುರದಿಂದ ಪಗಲಬಂಡೆ, ಕೊರ್ಲಕುಂಟೆ, ಪರಶುರಾಂಪುರ, ದೊಡ್ಡಚೆಲ್ಲೂರು ಕಿ.ಮೀ 74.92 ರಲ್ಲಿರುವ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯು ಸುಮಾರು 43 ವರ್ಷಗಳ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಸಂದರ್ಭದಲ್ಲಿ ಬೀಳುವ ಸೇತುವೆಯಾಗಿದ್ದು, ಸೇತುವೆಯು ಸುತ್ತಮುತ್ತಲಿನ 25 ರಿಂದ 30 ಗ್ರಾಮಗಳ ಸಂಪರ್ಕ ಸೇತುವೆಯಾಗಿದ್ದು, ಸೇತುವೆಯು ನಿರ್ಮಾಣ ಮಾಡುವುದು ಅವಶ್ಯವಿರುತ್ತದೆ ಅಲ್ಲದೇ ಪರಶುರಾಂಪುರ, ಕೊರಲಕುಂಟೆ ಇದರ ಹೊಸ ಸೇತುವೆಯ ನಿರ್ಮಾಣ 17.90 ಕಿ.ಮೀ ಉದ್ದದ ಕೆಳ ಸೇತುವೆಯು ಶಿಥಿಲಗೊಂಡಿದ್ದು, 2022-23ನೇ ಸಾಲಿನಲ್ಲಿ ಮಳೆಗಾಲದಲ್ಲಿ ರಸ್ತೆ ದಾಟುವಾಗ ಇಬ್ಬರು ವ್ಯಕ್ತಿಗಳು ಮರಣ ಹೊಂದಿರುತ್ತಾರೆ” ಎಂಬ ವಿಷಯದ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಲೋಕೋಪಯೋಗಿ ಸಚಿವರ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1003316462

ಈ ಕುರಿತು ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ “ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ (ರಾಷ್ಟ್ರೀಯ ಹೆದ್ದಾರಿ-150ಎ) ಯಿಂದ ವಿಶ್ವನಾಥನಹಳ್ಳಿ ರಸ್ತೆ (ರಾಜ್ಯ ಹೆದ್ದಾರಿ-243) ಕಿ.ಮೀ 75.30ರಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲು ರೂ.650.00 ಲಕ್ಷಗಳಿಗೆ ಹಾಗೂ ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ-ಓಬೇನಹಳ್ಳಿ ರಸ್ತೆ ಮಾರ್ಗ ರೆಡ್ಡಿಹಳ್ಳಿ, ಗೋಪನಹಳ್ಳಿ, ಚಿಕ್ಕನಹಳ್ಳಿ, ಯಲಗಟ್ಟಿ, ಕೋನಿಗರಹಳ್ಳಿ, ಗೋಸಿಕೆರೆ ಕಾವಲ್, ಗೋಸಿಕೆರೆ, ಚಿಕ್ಕಚೆಲ್ಲೂರು (ಜಿಲ್ಲಾ ಮುಖ್ಯ ರಸ್ತೆ) ಕಿ.ಮೀ. 18.00 ರಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲು ರೂ.4000/-ಲಕ್ಷಗಳಿಗೆ ಅಂದಾಜಿಸಲಾಗಿದ್ದು, ಈ ಸೇತುವೆಗಳಿಗೆ ಅನುದಾನದೊಂದಿಗೆ ಅನುಮೋದನೆ ಕೋರಿರುವ ಪ್ರಸ್ತಾವನೆ ಸ್ವೀಕೃತವಾಗಿದೆ” ಎಂದು ಸಚಿವರು ತಿಳಿಸಿದರು.

“2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸೇತುವೆಗಳ ದುರಸ್ಥಿ ಮತ್ತು ಪುನರ್ ನಿರ್ಮಾಣಕ್ಕಾಗಿ ರೂ.1,000.00 ಕೋಟಿಗಳ ಯೋಜನೆ ರೂಪಿಸಲಾಗುವುದು ಎಂದು ಘೋಷಿಸಲಾಗಿದ್ದು, ಅದರಂತೆ ಸರ್ಕಾರದ ಆದೇಶ ಸಂಖ್ಯೆ-ಲೋಇ 434 ಸಿಆರ್‍ಎಂ 2025 (ಇ) ದಿನಾಂಕ: 22.11.2025ರಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ಮೇಲಿರುವ ಸೇತುವೆಗಳ ಪುನರ್ ನಿರ್ಮಾಣ ಹಾಗೂ ಪುನಶ್ಚೇತನ ಕಾಮಗಾರಿಗಳನ್ನು ರೂ.2000/- ಕೋಟಿಗಳ ಅಂದಾಜು ವೆಚ್ಚದಲ್ಲಿ ಹಂತ ಹಂತವಾಗಿ ಕೈಗೊಳ್ಳಲು ಅನುಮೋದನೆ ನೀಡಲಾಗಿರುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರಿ ಸ್ಪೋಟ ಹಿನ್ನೆಲೆ ಭೂಮಿ ಕಂಪಿಸಿದ ಅನುಭವ: ಭಯದಿಂದ ಬೀದಿಯಲ್ಲಿ ನಿಂತ ಜನ

“ಅತೀ ಹೆಚ್ಚಿನ ಮಳೆಯಿಂದಾಗಿ ರಸ್ತೆ, ಸೇತುವೆಗಳ ಕುಸಿತದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರ ಜೊತೆಗೆ ಕಳೆದ ಮಳೆಗಾಲದ ಸಂದರ್ಭದಲ್ಲಿ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಉದ್ದೇಶದಿಂದ ಹೊಸ ಸೇತುವೆಗಳ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವರಿಂದ ಸಕರಾತ್ಮಕ ಸ್ಪಂದನೆ ದೊರಕಿದೆ” ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

ಬೆಳಗಾವಿ | ಬರ ಪರಿಸ್ಥಿತಿ ನಿರ್ವಹಣೆ: ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಪರಮೇಶ್ವರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ...