ಚೋರ್ಲಾ ಘಾಟ್‌ ದರೋಡೆ ಪ್ರಕರಣ; SIT ಮೇಲೆ ಅನುಮಾನ, ಪಾರದರ್ಶಕ ತನಿಖೆಗೆ ದೂರುದಾರ ಮನವಿ

Date:

ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಅವರು ಬೆಳಗಾವಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಮಹಾರಾಷ್ಟ್ರದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆ ಪಾರದರ್ಶಕವಾಗಿಲ್ಲ ಎಂದು ಪತ್ರದಲ್ಲಿ ಆರೋಪಿಸಿರುವ ಸಂದೀಪ್ ಪಾಟೀಲ್, ಘಟನೆಗೆ ಸಂಬಂಧಿಸಿದ ಕೆಲ ಮಹತ್ವದ ಆಡಿಯೋ ದಾಖಲೆಗಳು ತಮ್ಮ ಬಳಿ ಇರುವುದಾಗಿ ಉಲ್ಲೇಖಿಸಿದ್ದಾರೆ. ಆ ದಾಖಲೆಗಳ ಆಧಾರದಲ್ಲಿ ಬೆಳಗಾವಿ ಪೊಲೀಸರು ಎಫ್‌ಐಆರ್ ದಾಖಲಿಸಿ, ಸ್ವತಂತ್ರವಾಗಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಚೋರ್ಲಾ ಘಾಟ್ ದರೋಡೆ ಪ್ರಕರಣದ ತನಿಖೆ ಮಹಾರಾಷ್ಟ್ರ ಎಸ್‌ಐಟಿ ಕೈಯಲ್ಲಿದ್ದರೂ, ತನಿಖೆಯ ದಿಕ್ಕು ಮತ್ತು ಪ್ರಗತಿ ಕುರಿತು ಹಲವು ಅನುಮಾನಗಳು ಮೂಡಿವೆ ಎಂದು ಸಂದೀಪ್ ಪಾಟೀಲ್ ತಮ್ಮ ಪತ್ರದಲ್ಲಿ ಸೂಚಿಸಿದ್ದಾರೆ. ಪ್ರಕರಣದ ಸತ್ಯಾಂಶಗಳು ಹೊರಬರಬೇಕಾದರೆ ಕರ್ನಾಟಕ ಪೊಲೀಸರು ಹಸ್ತಕ್ಷೇಪ ಮಾಡಿ ಸಮಗ್ರ ತನಿಖೆ ನಡೆಸುವುದು ಅಗತ್ಯವೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ | ಕತ್ತೆ ಕಿರುಬ ದಾಳಿ : ಎರಡು ಮೇಕೆ ಮರಿಗಳು ಸಾವು

ಈ ಬೆಳವಣಿಗೆಯಿಂದಾಗಿ ಈಗಾಗಲೇ ಸಂಚಲನ ಮೂಡಿಸಿರುವ 400 ಕೋಟಿ ರೂ. ದರೋಡೆ ಪ್ರಕರಣ ಮತ್ತಷ್ಟು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬೆಳಗಾವಿ ಪೊಲೀಸರು ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...