ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

Date:

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಂಚು ನಡೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

- Advertisement -

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದಾರೆ. ಎಸ್‌ಐಆ‌ರ್ ಮೂಲಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸೆ.22, 23 ಮತ್ತು 24ರಂದು ಕೇವಲ ಮೂರು ದಿನಗಳಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರಂ-7 ಅರ್ಜಿಗಳ ಮಹಾಪೂರವೇ ಹರಿದುಬಂದಿದೆ. ಮುಸ್ಲಿಮರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮತದಾರರನ್ನು ಗುರಿಯಾಗಿಸಿಕೊಂಡು ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಸಮುದಾಯಗಳ ಬಹುತೇಕರು ಬಿಜೆಪಿಗೆ ವಿರುದ್ಧವಾಗಿ ಮತ ಚಲಾಯಿಸುತ್ತಾರೆ ಎಂಬ ಕಾರಣಕ್ಕೆ ಅವರನ್ನು ಗುರಿಯಾಗಿಸಲಾಗಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ದೇಶದಾದ್ಯಂತ ಮತ ಕಳ್ಳತನದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದರೂ ಬಿಜೆಪಿ ಹಾಗೂ ಚುನಾವಣಾ ಆಯೋಗ ಇದೇ ರೀತಿಯ ಕ್ರಮಗಳನ್ನು ಮುಂದುವರಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ತಂತ್ರಾಂಶದ ನೆರವಿನಿಂದ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಮತದಾರರ ಹೆಸರುಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸುವ ವಿಧಾನವನ್ನು ತಾವು ಈ ಹಿಂದೆಯೇ ಬಹಿರಂಗಪಡಿಸಿದ್ದಾಗಿ ಅವರು ಹೇಳಿದ್ದಾರೆ. ಬಿಜೆಪಿ ಹಾಗೂ ಚುನಾವಣಾ ಆಯೋಗಕ್ಕೆ ಸೇರಿದವರು ಶಾಮೀಲಾಗಿ, ಆಯ್ದ ಮತದಾರರ ವಿರುದ್ಧ ಸ್ವಯಂಚಾಲಿತವಾಗಿ ಫಾರಂ-7 ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಈ ಪ್ರಕ್ರಿಯೆಯನ್ನು ಮೇಲ್ಮಟ್ಟದಿಂದಲೇ ನಿಯಂತ್ರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ತಪ್ಪಿತಸ್ಥರ ವಿರುದ್ಧ ಎಫ್‌ಐಆ‌ರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಆದರೆ, ಎಫ್‌ಐಆ‌ರ್ ದಾಖಲಿಸಲು ಮುಖ್ಯ ಚುನಾವಣಾಧಿಕಾರಿ ನಿರಾಕರಿಸುತ್ತಿರುವುದೇಕೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಫಿ ಸಾಕ್ಷಿಯಾಗಬೇಕು. ಅವರ ಹೇಳಿಕೆ ಆಧರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತನಿಖೆ ನಡೆಸಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಇಂದು ಬಸವ ಜಯಂತಿ ಉತ್ಸವ ಸಮಿತಿ ಅಭಿನಂದನಾ ಸಮಾರಂಭ

ಬಸವ ಜಯಂತಿ ಉತ್ಸವ ಸಮಿತಿ-2026 ವತಿಯಿಂದ ಅಭಿನಂದನಾ ಸಮಾರಂಭವು ಸೆ.27ರಂದು ಸಂಜೆ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...