ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ನೈಋತ್ಯ ರೈಲ್ವೆ ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ರೈಲು ಸಂಖ್ಯೆ 06563 ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ಅ.16ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಅ.17ರಂದು ಬೆಳಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
ಮರುಪ್ರಯಾಣದಲ್ಲಿ ರೈಲು ಸಂಖ್ಯೆ 06564 ಬೆಳಗಾವಿ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಅ.17ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಅ.18ರಂದು ಬೆಳಗ್ಗೆ 5 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.
ನಿಲುಗಡೆ: ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ಳಾವರ, ಲೋಂಡಾ ಹಾಗೂ ಖಾನಾಪುರ ನಿಲ್ದಾಣಗಳಲ್ಲಿ ಎರಡೂ ಮಾರ್ಗಗಳಲ್ಲಿ ರೈಲು ನಿಲುಗಡೆ ಹೊಂದಿರಲಿದೆ.
18 ಬೋಗಿಗಳ ರೈಲು
ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 8 ಸ್ಟೀಪರ್ ಕ್ಲಾಸ್ ಹಾಗೂ 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳಿವೆ. ಇದರೊಂದಿಗೆ ದಿವ್ಯಾಂಗರಿಗಾಗಿ ಸೌಲಭ್ಯ ಹೊಂದಿರುವ 2 ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್‌ಗಳು ಇರಲಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.



