ಚಿಕ್ಕೋಡಿ ಗೋಕಾಕ್ ಹೊಸ ಜಿಲ್ಲೆ ರಚನೆಗೆ ನಿಯೋಗ ಮನವಿ

Date:

ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ನಿನ್ನೆ ಬೆಳಗಾವಿಯಲ್ಲಿ ಆರಂಭವಾದ ಚಳಿಗಾಲದ ವಿಧಾನಮಂಡಲ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯಿಸಿತು.

- Advertisement -

ಬೆಳಗಾವಿಯನ್ನು ಸಣ್ಣ ಜಿಲ್ಲೆಯಾಗಿ ಉಳಿಸಿಕೊಂಡು ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳನ್ನು ರಚಿಸಬೇಕು ಎಂದು ನಿಯೋಗ ಮನವಿ ಸಲ್ಲಿಸಿತು. 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆ, ಬೆಂಗಳೂರಿನ ಹೊರಗಿನ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದೆ ಎಂದು ನಿಯೋಗವು ಗಮನಸೆಳೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಜಿಲ್ಲೆ ವಿಭಜನೆ ಕುರಿತು ಒತ್ತಡ ಹೇರಲಾಗುತ್ತಿದೆ. ಬಹುತೇಕ ಶಾಸಕರು ಈ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಶಾಸಕರ ಸಭೆ ಕರೆದು ಮುಖ್ಯಮಂತ್ರಿ ಈ ವಿಷಯದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ” ಎಂದು ಹೇಳಿದರು.

1001111016

“ಸುಮಾರು 20 ವರ್ಷಗಳ ಹಿಂದೆಯೇ ಆಯೋಗಗಳು ಗೋಕಾಕ್ ಮತ್ತು ಚಿಕ್ಕೋಡಿ ಜಿಲ್ಲೆ ರಚನೆ ಶಿಫಾರಸು ಮಾಡಿದ್ದವು. ಅಥಣಿ ಹಾಗೂ ಬೈಲಹೊಂಗಲ ಜಿಲ್ಲೆಗಳ ರಚನೆ ಆರ್ಥಿಕ ಮತ್ತು ಮೂಲಸೌಕರ್ಯ ಕಾರಣಗಳಿಂದ ಕಷ್ಟಸಾಧ್ಯ. ಎಲ್ಲಾ ಅಂಶಗಳನ್ನು ಪರಿಗಣಿಸಿದರೆ ಗೋಕಾಕ್ ಹಾಗೂ ಚಿಕ್ಕೋಡಿ ಜಿಲ್ಲೆ ರಚನೆಯೇ ಸೂಕ್ತ. ಈ ವಿಚಾರವನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಎರಡು ದಿನಗಳಲ್ಲಿ ಸಭೆ ಕರೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸಭೆಯ ಬಳಿಕ ಮುಂದಿನ ನಿರ್ಧಾರ ಸ್ಪಷ್ಟವಾಗಲಿದೆ” ಎಂದು ತಿಳಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...