ಬೆಳಗಾವಿ | ವರದಕ್ಷಿಣೆಗೆ ಬೇಡಿಕೆ: ಮುರಿದುಬಿದ್ದ ಮದುವೆ; ಜೈಲು ಸೇರಿದ ವರ

Date:

ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರ ಜೈಲು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಮದುವೆ ಮುರಿದುಬಿದ್ದಿದೆ.

- Advertisement -

ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರನ ಕುಟುಂಬದ ವಿರುದ್ಧ ವಧುವಿನ ಪೋಷಕರು ದೂರು ನೀಡಿದ್ದು, ವರ ಸಚಿನ್ ಪಾಟೀಲ್‌ನನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಖಾನಾಪುರದ ಕಲ್ಯಾಣ ಮಂಟಪದಲ್ಲಿ ಮೂರು ದಿನಗಳ ಹಿಂದಿನ ದಿನಾಂಕಕ್ಕೆ ಮದುವೆ ನಿಶ್ಚಯವಾಗಿತ್ತು. ಮದುವೆ ನಿಶ್ಚಿತಾರ್ಥದ ವೇಳೆ, 50 ಗ್ರಾಂ ಚಿನ್ನ ಮತ್ತು ಒಂದು ಲಕ್ಷ ರೂ. ಹಣವನ್ನು ವರದಕ್ಷಿಣೆಯಾಗಿ ನೀಡುವ ಮಾತುಕತೆಯಾಗಿತ್ತು ಎಂದು ತಿಳಿದುಬಂದಿದೆ.

ಆದರೆ, ಮದುವೆ ಸಮೀಪಿಸುತ್ತಿದ್ದಂತೆ ವರನ ಕುಟುಂಬದ ಬೇಡಿಕೆ ಹೆಚ್ಚಾಗಿತ್ತು. 100 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ವರದಕ್ಷಿಣೆ ನೀಡಬೇಕೆಂದು ವರನ ಕುಟುಂಬ ಪಟ್ಟು ಹಿಡಿದಿತ್ತು ಎಂದು ಹೇಳಲಾಗಿದೆ.

ಇದರಿಂದ ಬೇಸತ್ತ ವಧು ಪೋಷಕರು ಖಾನಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವರನನ್ನು ಬಂಧಿಸಿದ್ದು, ಹಿಂಡಗಲಾ ಜೈಲಿಗೆ ಕಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...