ಬೆಳಗಾವಿ | ಸುವರ್ಣಸೌಧಕ್ಕೆ ರಾಜ್ಯ ಮಟ್ಟದ ಕಚೇರಿ ಸ್ಥಳಾಂತರಕ್ಕೆ ಆಗ್ರಹ

Date:

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ, ಉತ್ತರ ಕರ್ನಾಟಕದ ಪ್ರದೇಶಗಳ ಜನರ ಕಲ್ಯಾಣಕ್ಕಾಗಿ ರಾಜ್ಯ ಮಟ್ಟದ 9 ಕಚೇರಿಗಳನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ತೆರೆಯಲು 2019ರಲ್ಲಿಯೇ ಗೆಜೆಟ್‌ ಹೊರಡಿಸಲಾಗಿದೆ. ಆದರೂ, ಕಚೇರಿಗಳನ್ನು ಸ್ಥಳಾಂತರಿಸಿಲ್ಲ. ಕೂಡಲೇ ಕಚೇರಿಗಳನ್ನು ಸುವರ್ಣಸೌಧದಲ್ಲಿ ತೆರೆಯಬೇಕು ಎಂದು ಬೆಳಗಾವಿ ಜಿಲ್ಲೆಯ ಮಾಹಿತಿ ಹಕ್ಕು ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ್ ಒತ್ತಾಯಿಸಿದ್ದಾರೆ.

- Advertisement -

ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಅವರು, “ಕರ್ನಾಟಕ ಸರ್ಕಾರವು 9 ಕಚೇರಿಗಳಲ್ಲಿ 3 ಕಚೇರಿಗಳನ್ನು ಈಗಾಗಲೇ ಸ್ಥಳಾಂತರಿಸಿದೆ. 3 ಕಚೇರಿಗಳು ಈಗಲೇ ಸ್ಥಳಾಂತರಗೊಳ್ಳುತ್ತಿವೆ. ಇನ್ನು 3 ಕಚೇರಿಗಳನ್ನು 6 ತಿಂಗಳ ಕಾಲಾವಧಿಯಲ್ಲಿ ಸ್ಥಳಾಂತರಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು 2020ರಲ್ಲಿಯೇ ಹೈಕೋರ್ಟ್‌ ತಿಳಿಸಿದ್ದರು. ಆದರೆ, ಈವರೆಗೆ ಕಚೇರಿಗಳು ಸ್ಥಳಾಂತರವಾಗಿಲ್ಲ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

“ಹಿಂದಿನ ಸರ್ಕಾರ ತನ್ನ ಮಾತಿನಂತೆ ನಡೆದುಕೊಳ್ಳದೆ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದೆ. ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುವ ಭ್ರಷ್ಟ ಮಂತ್ರಿಗಳು, ಭ್ರಷ್ಟ ಶಾಸಕರು, ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

“ಸುವರ್ಣಸೌಧದಲ್ಲಿ ರಾಜ್ಯ ಮಟ್ಟದ ಕಚೇರಿಗಳನ್ನು ತೆರೆಯುವ ಬಗ್ಗೆ ಯಾವೊಬ್ಬ ಶಾಸಕರು, ಸಚಿವರು ಇಲ್ಲಿವರೆಗೂ ಧ್ವನಿ ಎತ್ತುತ್ತಿಲ್ಲ. ಭ್ರಷ್ಟಾಚಾರಕ್ಕೆ ಮಾತ್ರ ಸೀಮಿತವಾಗಿರುವ, ಐಷಾರಾಮಿ ಜೀವನ ಬಯಸುತ್ತಿರುವ ಜನಪ್ರತಿನಿಧಿಗಳು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

438 ಕೋಟಿ ರೂ. ವೆಚ್ಚ ಮಾಡಿ ಸುವರ್ಣಸೌಧವನ್ನು ಕಟ್ಟಲಾಗಿದೆ. ಆದರೆ, ಅದು ಖಾಲಿ ಉಳಿದಿದೆ. ಅದರ ನಿರ್ವಹಣೆಗೆ ಪ್ರತಿ ವರ್ಷ ಕೋಟ್ಯಾಂತರ ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತಿದೆ. ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸಿ, ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಅರ್ಧ ಇಲಾಖೆಗಳ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಬೇಕು. ಆ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಿ, ಅನುಮೋದಿಸಬೇಕು” ಎಂದು ಆಗ್ರಹಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...