ಬೆಳಗಾವಿಗೆ ಅ.25,26 ಡಿಕೆ ಶಿವಕುಮಾ‌ರ್ ಭೇಟಿ, ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಅ.26ರಂದು ಮಹತ್ವದ ಸಭೆ

Date:

ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಅಕ್ಟೋಬರ್ 25 ಮತ್ತು 26ರಂದು ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ಉತ್ಸವದ ಸಮಾರೋಪ ಸಮಾರಂಭ, ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗಿನ ಸಭೆ ಹಾಗೂ ಕಬ್ಬು ಬೆಳೆಗಾರರೊಂದಿಗಿನ ಚರ್ಚೆ ಈ ಪ್ರವಾಸದ ಪ್ರಮುಖ ಕಾರ್ಯಕ್ರಮಗಳಾಗಿವೆ.

- Advertisement -

ಅ.25ರಂದು ಕಿತ್ತೂರು ಉತ್ಸವದ ಸಮಾರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಕ್ಟೋಬ‌ರ್ 25ರಂದು ಕಿತ್ತೂರಿನಲ್ಲಿ ನಡೆಯಲಿರುವ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಡಿ.ಕೆ. ಶಿವಕುಮಾ‌ರ್ ಭಾಗವಹಿಸಲಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮನ ಐತಿಹಾಸಿಕ ಪರಂಪರೆಯನ್ನು ಸ್ಮರಿಸುವ ಉತ್ಸವದ ಅಂತಿಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್ 26ರಂದು ಬೆಳಗ್ಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಯಲಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಸಕ್ಕರೆ ಉದ್ಯಮಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ.

ಇದೇ ದಿನ ಜಿಲ್ಲಾಡಳಿತ ಆಯೋಜಿಸಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅವರು, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸವದತ್ತಿಯ ಶ್ರೀ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆಗೆ ನಿರೀಕ್ಷೆ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬ‌ರ್ 26ರಂದು ಸುವರ್ಣ ವಿಧಾನಸೌಧದಲ್ಲಿ ರೈತರೊಂದಿಗೆ ನಡೆಯಲಿರುವ ಪ್ರತ್ಯೇಕ ಸಭೆ ಮಹತ್ವ ಪಡೆದುಕೊಂಡಿದೆ.

ಕಬ್ಬು ಬೆಳೆಗಾರರ ಬೇಡಿಕೆಗಳು, ಕಬ್ಬಿನ ಬೆಲೆ ನಿಗದಿ ಹಾಗೂ ಕೃಷಿ ಸಂಬಂಧಿತ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ರೈತರ ಬೇಡಿಕೆಗಳ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ಕಬ್ಬು ಬೆಳೆಗಾರರು ಗಮನಹರಿಸಿದ್ದಾರೆ.

ಎರಡು ದಿನಗಳ ಪ್ರವಾಸದ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ ಡಿ.ಕೆ. ಶಿವಕುಮಾ‌ರ್ ಅವರು ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ. ::

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...