ಬೆಳಗಾವಿ | ರಾಯಬಾಗ ಆಸ್ಪತ್ರೆಯಲ್ಲಿ ವಿದ್ಯುತ್ ಅವ್ಯವಸ್ಥೆ; ರೋಗಿಗಳ ಪರದಾಟ

Date:

ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗಳು ಪರದಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಸೋಮವಾರ ರಾತ್ರಿ ನಡೆದಿದೆ.

ರಾತ್ರಿ 10 ಗಂಟೆಯ ವೇಳೆಗೆ ವಿದ್ಯುತ್‌ ಕಡಿತಗೊಂಡಿತ್ತು. ಕೆಲ ಸಮಯ ವಿದ್ಯುತ್‌ ಬಾರದೆ, ಪರ್ಯಾಯ ವ್ಯವಸ್ಥೆಯ ಬಗ್ಗೆ ಸಿಬ್ಬಂದಿ ಕಾಳಜಿ ವಹಿಸದಿದ್ದ ಕಾರಣ ರೋಗಿಗಳು ಪರದಾಡಿದ್ದಾರೆ. ಆಸ್ಪತ್ರೆಯಲ್ಲಿಯೇ ವಿದ್ಯುತ್‌ ಸಂಪರ್ಕ ಸರಿಯಾಗಿ ಇಲ್ಲದನ್ನು ಕಂಡು ರೋಗಿಗಳು ಮತ್ತು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯಲ್ಲಿ ಜನರೇಟರ್‌ ಇದ್ದರೂ, ಅದನ್ನು ಸಿಬ್ಬಂದಿಗಳು ಆನ್‌ ಮಾಡಿಲ್ಲ. ಕರೆಂಟ್‌ ಇಲ್ಲದ ಸಮಯದಲ್ಲಿ ವೈದ್ಯರು, ಸಿಬ್ಬಂದಿಗಳ ಸುಳಿವೇ ಇರಲಿಲ್ಲ ರೋಗಿಗಳು ಆರೋಪಿಸಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿ ಧೋರಣೆಯ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸೋಮವಾರ ರಾತ್ರಿ 10 ನಿಮಿಷ ವಿದ್ಯುತ್‌ ಕಡಿತವಾಗಿತ್ತು. ಸಿಬ್ಬಂದಿಗಳು ಜರನೇಟರ್ ಆನ್ ಮಾಡದೇ ಇದ್ದಿದ್ದರಿಂದ ರೋಗಿಗಳು ಆತಂಕಗೊಂಡಿದ್ದಾರೆ. ಪ್ರಕರಣದ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇನೆ. ಲೋಪಕ್ಕೆ ಕಾರಣವಾದರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ರಾಯಬಾಗ ವೈದ್ಯಾಧಿಕಾರಿ ಶಿವನಗೌಡ ಎಂ ಪಾಟೀಲ್ ತಿಳಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್...

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...