ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ತಪ್ಪಿಸಲು ನೈರುತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ ಮಾರ್ಗದಲ್ಲಿ ನಾಲ್ಕು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ತೀರ್ಮಾನಿಸಿದೆ.
ರೈಲು ಸಂಖ್ಯೆ 06551 (ಎಸ್.ಎಂ.ವಿ.ಟಿ. ಬೆಂಗಳೂರು – ಬೆಳಗಾವಿ) ಆಗಸ್ಟ್ 7, 9, 14 ಮತ್ತು 16 ರಂದು ಸಂಜೆ 7.00 ಗಂಟೆಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಿಂದ ಹೊರಡಲಿದೆ.
ಅದೇ ರೀತಿ ರೈಲು ಸಂಖ್ಯೆ 06552 (ಬೆಳಗಾವಿ – ಎಸ್.ಎಂ.ವಿ.ಟಿ. ಬೆಂಗಳೂರು) ಆಗಸ್ಟ್ 8, 10, 15 ಮತ್ತು 17 ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 5.00ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರು ತಲುಪಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿಲುಗಡೆ ನಿಲ್ದಾಣಗಳು:
ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್.ಎಂ.ಎಂ. ಹಾವೇರಿ, ಎಸ್.ಎಸ್.ಎಸ್. ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ಈ ರೈಲುಗಳಿಗೆ ನಿಲುಗಡೆ ನೀಡಲಾಗಿದೆ.
ನೈರುತ್ಯ ರೈಲ್ವೆಯು ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಮನವಿ ಮಾಡಿದೆ.