ಅಬಕಾರಿ ಇನ್ಸ್ಪೆಕ್ಟರ್ ಸಾವು ಹೇಗೆ ಆಯಿತು? ಅದು ಕೊಲೆಯೇ ಅಥವಾ ಬೇರೆ ಕಾರಣವೇ? :ಮಹೇಶ ಕುಮಠಳ್ಳಿಗೆ ಚಿದಾನಂದ ಸವದಿ ಸವಾಲು

Date:

ಬೆಳಗಾವಿ ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಹೇಶ ಕುಮಠಳ್ಳಿ ನೀಡಿರುವ ಹೇಳಿಕೆಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಸವಾಲು ಹಾಕಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಚಿದಾನಂದ ಸವದಿ, ಅಥಣಿಯಲ್ಲಿ ಕಾರ್ಯನಿರ್ವಹಿಸಿದ್ದ ಅಬಕಾರಿ ಇನ್ಸ್ಪೆಕ್ಟರ್ ಲಕ್ಷ್ಮಣ ಐಗಳಿ ಅವರ ಸಾವಿನ ಕುರಿತು ಮಹೇಶ ಕುಮಠಳ್ಳಿಯವರು ಸ್ಪಷ್ಟ ಉತ್ತರ ನೀಡಬೇಕು ಎಂದು ಸವಾಲು ಹಾಕಿದರು. “ಅಬಕಾರಿ ಇನ್ಸ್ಪೆಕ್ಟರ್ ಸಾವು ಹೇಗೆ ಆಯಿತು? ಅದು ಕೊಲೆಯೇ ಅಥವಾ ಬೇರೆ ಕಾರಣವೇ? ಈ ಬಗ್ಗೆ ನಾಳೆ ಸಂಜೆ ವೇಳೆಗೆ ಉತ್ತರ ಕೊಡಬೇಕು” ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಮಹೇಶ ಕುಮಠಳ್ಳಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಆರೋಪಿಸಿದ ಅವರು, “ಕೊರೊನಾ ಸಮಯದಲ್ಲಿ ಮನೆಯ ಬಾಗಿಲು ಹಾಕಿಕೊಂಡು ‘ಯಾರಿಗೂ ಪ್ರವೇಶವಿಲ್ಲ’ ಎಂಬ ಬೋರ್ಡ್ ಹಾಕಿದ್ದವರು ಇಂದು ಸಾರ್ವಜನಿಕ ಜೀವನದ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕದ ಗಾದೆಯನ್ನು ಉಲ್ಲೇಖಿಸಿದ ಚಿದಾನಂದ ಸವದಿ, “ಕಬ್ಬಿಗೆ ಬೆಂಕಿ ಹತ್ತಿದಾಗ ಜೋಳ ಸುಟ್ಟಂತಾಗಿದೆ. ನಿಂಗರಾಜ ಕರೆಣ್ಣವರ ಮೇಲೆ ಹಲ್ಲೆ ನಡೆದ ಕೂಡಲೇ ಆಸ್ಪತ್ರೆಯಲ್ಲಿದ್ದರೂ, ಈಗ ರಾಜಕೀಯ ಲಾಭಕ್ಕಾಗಿ ಹೇಳಿಕೆಗಳನ್ನು ನೀಡಲಾಗುತ್ತಿದೆ” ಎಂದು ಟೀಕಿಸಿದರು.

ಅಥಣಿಯನ್ನು ಬಿಹಾರ ಆಗಲು ಬಿಡುವುದಿಲ್ಲ ಎಂದು ಚಿದಾನಂದ ಸವದಿ ಖಡಕ್ ಎಚ್ಚರಿಕೆ ನೀಡಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...