ಆಸೆ ಇತ್ತು, ಆದರೆ ಸಿಗಲಿಲ್ಲ: ಡಿಸಿಎಂ ಮತ್ತು ಕೆಪಿಸಿಸಿ ಹುದ್ದೆ ಕುರಿತು ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

Date:

ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಯ ಬೆನ್ನಲ್ಲೇ ಅಸಮಾಧಾನ ಹಾಗೂ ರಾಜೀನಾಮೆ ಗದ್ದಲ ಜೋರಾಗಿರುವ ನಡುವೆಯೇ ಸಚಿವ ಸತೀಶ್‌ ಜಾರಕಿಹೊಳಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

- Advertisement -

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಗೆ ಬೇಕಾದ ಖಾತೆ ಸಿಗದಿರುವ ಬಗ್ಗೆ ಪ್ರತಿಕ್ರಿಯಿಸಿ, ನನಗೆ ಯಾವುದೇ ದುಃಖನೂ ಇಲ್ಲ, ಸಂತೋಷನೂ ಇಲ್ಲ ಎಂದು ಹೇಳಿದರು. ಹಿರಿಯ ನಾಯಕರ ಅಸಮಾಧಾನವನ್ನು ನಿವಾರಿಸುವ ಸಂಪೂರ್ಣ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆದರೆ ಈ ಪರಿಸ್ಥಿತಿಯನ್ನು ಸಮಾಧಾನಪಡಿಸುವ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವ ಸಾಮರ್ಥ್ಯ ಸಿದ್ದರಾಮಯ್ಯ ಅವರಿಗೆ ಇದೆ. ಮುಂದಿನ ಒಂದೆರಡು ದಿನಗಳಲ್ಲಿ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ ಎಂದು ಹೇಳಿದರು.

ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಸಮಾಧಾನದ ಬಗ್ಗೆ ಮಾತನಾಡಿದ ಜಾರಕಿಹೊಳಿ, ರಾಜಕಾರಣದಲ್ಲಿ ಉನ್ನತ ಹುದ್ದೆಗಳ ಬಯಕೆ ಸಹಜ. ಆದರೆ ಎಲ್ಲರಿಗೂ ಅಂತಹ ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ. ಈ ಗೊಂದಲಗಳನ್ನು ಮುಖ್ಯಮಂತ್ರಿ ಬಗೆಹರಿಸಲಿದ್ದಾರೆ ಎಂದರು.

ಡಿಸಿಎಂ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, “ಆಸೆ ಇತ್ತು, ಆದರೆ ಏನು ಮಾಡಲಿಕ್ಕೆ ಆಗಲ್ಲ. ಸಿಕ್ಕಿದ್ದಕ್ಕೆ ಸಮಾಧಾನ, ತೃಪ್ತಿ ಪಡಬೇಕು ಅಷ್ಟೇ” ಎಂದು ತಮ್ಮ ಮನದಾಳದ ಮಾತು ಹಂಚಿಕೊಂಡರು.

ರಾಜೀನಾಮೆ ನೀಡುವ ಸಾಧ್ಯತೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ರಾಜೀನಾಮೆ ಯಾಕೆ ಕೊಡಬೇಕು? ಅದರ ಅವಶ್ಯಕತೆ ಇಲ್ಲ. ನಮಗೆ ಯಾವ ಖಾತೆ ಇದೆಯೋ ಅದನ್ನೇ ಮುಂದುವರಿಸಿದ್ದಾರೆ. ನಾನು ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...