ಅನುದಾನ ಕೊರತೆ: ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

Date:

ಕನ್ನಡ ಸಾಹಿತ್ಯ ಪರಿಷತ್ತಿಗೆ ರಾಜ್ಯ ಸರ್ಕಾರದಿಂದ ಅನುದಾನ ಸಿಗುವುದು ವಿಳಂಬವಾಗಿದ್ದು, ಇದರ ಪರಿಣಾಮ ಮಂಡ್ಯದಲ್ಲಿ ಈ ವರ್ಷ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ₹5 ಕೋಟಿ ಅನುದಾನ ಘೋಷಿಸಿದೆ. ಅದರಲ್ಲಿ ನವೆಂಬರ್ 2ರಂದು ಮೊದಲ ಕಂತು ₹1.67 ಕೋಟಿ ಬಂದಿದೆ. ಇದರಲ್ಲಿ ಪರಿಷತ್ತಿನ ಸಿಬ್ಬಂದಿ ವೇತನ, ನಿರ್ವಹಣೆಗೆ ವೆಚ್ಚ ಮಾಡಬೇಕಿದೆ. ಎರಡನೇ ಕಂತಿನ ಅನುದಾನ ಬಂದ ಬಳಿಕವೇ ಉಳಿದ ಚಟುವಟಿಕೆ ನಡೆಸಲು ಉದ್ದೇಶಿಸಲಾಗಿದೆ.

“2021-22ರ ಸಾಲಿನಲ್ಲಿ ₹10 ಕೋಟಿ ಅನುದಾನ ನೀಡಲಾಗಿತ್ತು. ಅದರಲ್ಲಿ ₹5 ಕೋಟಿ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳಸಲಾಯಿತು. ಆದರೆ, 2023-24ನೇ ಸಾಲಿನಲ್ಲಿ ಅರ್ಧದಷ್ಟು ಅಂದರೆ; ₹5 ಕೋಟಿ ಮಾತ್ರ ನೀಡಲಾಗಿದೆ. ಹೀಗಾಗಿ, ಈ ವರ್ಷ ಮಂಡ್ಯದ ಸಮ್ಮೇಳನ ಮಾಡದಿರಲು ನಿರ್ಧರಿಸಲಾಗಿದೆ” ಎಂದು ಪರಿಷತ್ತಿನ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

₹5 ಕೋಟಿ ಅನುದಾನ ನಾಲ್ಕು ಕಂತುಗಳಲ್ಲಿ ಬರಬೇಕಿದೆ. ಜೂನ್‌ನಲ್ಲಿ ಮೊದಲ ಕಂತು, ಆಗಸ್ಟ್‌ನಲ್ಲಿ ಎರಡನೇ, ನವೆಂಬರ್‌ಗೆ ಮೂರು ಹಾಗೂ ಫೆಬ್ರವರಿಗೆ ನಾಲ್ಕನೇ ಕಂತಿನ ಹಣ ಬರಬೇಕು. ಎರಡನೇ ಮತ್ತು ಮೂರನೇ ಕಂತಿನ ಹಣ ಶೀಘ್ರ ನೀಡಲು ಕೋರಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಕಡೆ ಬರ ಬಿದ್ದಿದೆ. ರೈತರ ಮನೆಯಲ್ಲಿ ಅನ್ನವಿಲ್ಲ. ಇಂಥ ಸಂದರ್ಭದಲ್ಲಿ ಸಾಹಿತ್ಯದ ಹೋಳಿಗೆ ಸವಿಯಬಾರದು ಎಂಬ ಕಾರಣಕ್ಕೆ ಸ್ವಯಂ ಪ್ರೇರಿತವಾಗಿ ತಾತ್ಕಾಲಿಕವಾಗಿ ಸಮ್ಮೇಳನ ನಿಲ್ಲಿಸಿದ್ದೇವೆ. ಜಾನುವಾರುಗಳ ಮೇವಿಗಾಗಿ ಪರದಾಡುವ ಸ್ಥಿತಿ ಇದೆ. ಪರಿಷತ್ತು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಇದನ್ನು ಇನ್ನಷ್ಟು ಜನಪರ ಮಾಡುವ ಉದ್ದೇಶದಿಂದ ಹೀಗೆ ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ: ಸಾಲುಮರದ ತಿಮ್ಮಕ್ಕ

ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ...

ತುಮಕೂರು | ಸೇವೆ ಮರೆತ ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ

ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಸಂದ ಈ ಸುವರ್ಣ ಸಂದರ್ಭದಲ್ಲಿ...

ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ...

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...