ಆ.26ರಿಂದ ಸೆ.6ರವರೆಗೆ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ ಪೈಗಂಬರ್’ ಸೀರತ್‌ ಅಭಿಯಾನ

Date:

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್‌(ಸ)’ ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.

- Advertisement -

ಪ್ರವಾದಿ ಮುಹಮ್ಮದ್‌(ಸ) ಅವರು ಜಗತ್ತಿನಲ್ಲಿ ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಆಧಾರದ ಮೇಲೆ ಸಮಗ್ರ ಮಾನವೀಯ ಕ್ರಾಂತಿಗೆ ಕಾರಣರಾದರು. ಜನರ ಮನಸ್ಸುಗಳನ್ನು ಸಂಸ್ಕರಿಸಿ, ನೈತಿಕತೆ ಮತ್ತು ಚಾರಿತ್ರ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿ ಹಾಗೂ ಸಮಾಜದಲ್ಲಿ ಪರಿವರ್ತನೆ ತಂದರು. ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಆಡಳಿತ ಸೇರಿದಂತೆ ಜೀವನದ ಎಲ್ಲ ಕ್ಷೇತ್ರಗಳನ್ನು ಬೆಳಗಿಸುವುದು ಅವರ ಸಂದೇಶದ ಉದ್ದೇಶವಾಗಿತ್ತು ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಪ್ರವಾದಿ ಮುಹಮ್ಮದ್(ಸ) ಅವರ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಹಾಗೂ ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಉದ್ದೇಶವಾಗಿದೆ.

ಅಭಿಯಾನದ ಅಂಗವಾಗಿ ಸಾಹಿತಿ ಯೋಗೇಶ್ ಮಾಸ್ಟ‌ರ್ ಬರೆದ ‘ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಹಾಗೂ ವಾರ್ತಾ ಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬ‌ರ್ ಮುಹಮ್ಮದ್‌(ಸ)’ ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುವುದು.

ವೈಯಕ್ತಿಕ ಭೇಟಿ, ವಿಚಾರಗೋಷ್ಠಿ, ಸಾರ್ವಜನಿಕ ಸಮಾವೇಶ, ಸಂವಾದ, ಚರ್ಚಾಗೋಷ್ಠಿ, ಸೀರತ್‌ ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು ಹಾಗೂ ಸೌಹಾರ್ದ ಸಂದೇಶ ಕ್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಮೊಹಸಿನ್ ಡಾಲಾಯತ್, ಯಾಸಿನ್ ಮಖಾನದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...