ಬೆಳಗಾವಿಯಲ್ಲಿ ‘ಫಾಲೋವರ್’ ಸಿನಿಮಾ ವಿರುದ್ಧ ಕರವೇ ಆಕ್ರೋಶ: ಪ್ರದರ್ಶನ ರದ್ದು

Date:

ಬೆಳಗಾವಿ ಮಹಾರಾಷ್ಟ್ರದ ಭಾಗವೆಂದು ತೋರಿಸಲಾಗಿದೆ ಎಂಬ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಗರದ ಐನಾಕ್ಸ್ ಚಿತ್ರಮಂದಿರದಲ್ಲಿ ನಡೆಯಬೇಕಿದ್ದ ಮರಾಠಿ ಸಿನಿಮಾ ‘ಫಾಲೋವರ್’ ಪ್ರೀಮಿಯರ್ ಶೋ ರದ್ದುಗೊಂಡಿದೆ.

- Advertisement -

ಪ್ರತಿಭಟನೆ ಮತ್ತು ಆರೋಪ:
ಚಿತ್ರದ ಟ್ರೇಲರ್‌ನಲ್ಲಿ ಯಳ್ಳೂರ ಮಹಾರಾಷ್ಟ್ರ ನಾಮಫಲಕ ವಿವಾದ ಮತ್ತು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲಿದೆ ಎಂಬ ವಿಷಯ ಉಲ್ಲೇಖಿಸಲಾಗಿದೆ ಎಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪೊಲೀಸರ ಜಾಗೃತ ಪ್ರತಿಕ್ರಿಯೆ:
ಸ್ಥಳಕ್ಕೆ ಖಡೇಬಜಾರ್ ಎಸಿಪಿ ಶೇಖರಪ್ಪ ಹಾಗೂ ಸಿಪಿಐ ಅಲ್ತಾಫ್ ಮುಲ್ಲಾ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸುವ ಪ್ರಯತ್ನ ನಡೆಸಿದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಟಾಕೀಸ್ ಸಿಬ್ಬಂದಿ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಿದರು ಮತ್ತು ಟಿಕೆಟ್‌ ಪಡೆದ ವೀಕ್ಷಕರಿಗೆ ಹಣ ವಾಪಸ್ ನೀಡಲಾಯಿತು.

ಚಿತ್ರತಂಡ ಸ್ಪಷ್ಟನೆ:
ಚಿತ್ರದ ನಿರ್ಮಾಪಕ ಹರ್ಷದ್ ನಲವಡೆ ಪ್ರತಿಕ್ರಿಯಿಸಿ, “ಚಿತ್ರದಲ್ಲಿ ಯಾವುದೇ ಗಡಿ ವಿವಾದವಿಲ್ಲ. ಇದು ಮೂವರು ಸ್ನೇಹಿತರ ಕಥೆ. ಕನ್ನಡದಲ್ಲಿಯೇ ಸಿನಿಮಾ ಪ್ರದರ್ಶಿಸುತ್ತಿದ್ದೇವೆ. ಇದನ್ನು ರೋಟರ್‌ಡ್ಯಾಮ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...