ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

Date:

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು ಖರೀದಿಸಲು ಮತ್ತೆ ಸಾಲದ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದಲ್ಲಿ ಮಳೆ ಕೊರತೆಯಿಂದ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬೆಳಗಾವಿ ಜಿಲ್ಲೆಯ 15 ತಾಲೂಕುಗಳ ಪೈಕಿ 13 ತಾಲೂಕುಗಳು ಬರಪೀಡಿತ ಪಟ್ಟಿಯಲ್ಲಿವೆ. ಜಿಲ್ಲೆಯ ಹಲವೆಡೆ ಮಳೆ ಕೊರತೆಯಿಂದ ಬೆಳೆ ಒಣಗಿ ರೈತರು ನಷ್ಟ ಅನುಭವಿಸಿದ್ದಾರೆ.

ಬೆಳೆ ಕಳೆದುಕೊಂಡ ರೈತರಿಗೆ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಪ್ರತಿ ರೈತರಿಗೆ ₹2,500 ಬರ ಪರಿಹಾರ ನೀಡುವುದಾಗಿ ಘೋಷಿಸಿದೆ. ಆದರೆ ಪರಿಹಾರದ ಹಣ ಇನ್ನೂ ರೈತರ ಖಾತೆಗಳಿಗೆ ಜಮೆಯಾಗಿಲ್ಲ ಎಂಬುದು ರೈತರ ಅಳಲು. ಒಂದೆಡೆ ಬೆಳೆ ನಷ್ಟ, ಮತ್ತೊಂದೆಡೆ ಹಿಂಗಾರು ಬಿತ್ತನೆಗೆ ಬೇಕಾದ ಹಣದ ಕೊರತೆ ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.

- Advertisement -

ಬಿತ್ತನೆಗೆ ಹಣವಿಲ್ಲದೆ ರೈತರ ಪರದಾಟ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮುಂಗಾರು ಹಂಗಾಮಿನಲ್ಲಿ ಬಿತ್ತನೆಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡಿದ್ದ ರೈತರಿಗೆ ಮಳೆ ಕೈಕೊಟ್ಟ ಪರಿಣಾಮ ಆ ಹಣವೂ ವಾಪಸ್ ಬಂದಿಲ್ಲ. ಈಗ ಹಿಂಗಾರು ಬಿತ್ತನೆ ಆರಂಭವಾಗಿದ್ದು, ಮತ್ತೊಮ್ಮೆ ಹೊಲಕ್ಕೆ ಹಣ ಹಾಕಬೇಕಾಗಿದೆ.

Advertisements

ಬೀಜ, ರಸಗೊಬ್ಬರ, ಕೀಟನಾಶಕ, ಉಳುಮೆ ಹಾಗೂ ಕೂಲಿ ಸೇರಿದಂತೆ ಹಿಂಗಾರು ಬಿತ್ತನೆಗೆ ಹಲವು ಖರ್ಚುಗಳಿವೆ. ಈಗಾಗಲೇ ಸಾಲದಲ್ಲಿರುವ ರೈತರು ಮತ್ತಷ್ಟು ಸಾಲ ಮಾಡಿಯೇ ಬಿತ್ತನೆ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಸರ್ಕಾರ ಘೋಷಿಸಿರುವ ₹2,500 ಪರಿಹಾರ ಮೊತ್ತ ಕಡಿಮೆಯಾದರೂ, ಸಂಕಷ್ಟದಲ್ಲಿರುವ ರೈತರಿಗೆ ಕನಿಷ್ಠ ಆ ಹಣವಾದರೂ ಸಮಯಕ್ಕೆ ಸರಿಯಾಗಿ ಸಿಕ್ಕರೆ ಬಿತ್ತನೆಗೆ ಸ್ವಲ್ಪ ಅನುಕೂಲವಾಗಲಿದೆ. ಹೀಗಾಗಿ ಹಿಂಗಾರು ಬಿತ್ತನೆ ವಿಳಂಬವಾಗುವ ಮುನ್ನ ಪರಿಹಾರ ಹಣವನ್ನು ಖಾತೆಗೆ ಜಮಾ ಮಾಡಬೇಕು ಎಂಬುದು ರೈತರ ಒತ್ತಾಯವಾಗಿದೆ.

ಬಿಡಿಗಾಸು ಬರ ಪರಿಹಾರ!

ಬರ ಪರಿಹಾರವಾಗಿ ನೀಡುತ್ತಿರುವ ₹2,500 ಮೊತ್ತದ ಬಗ್ಗೆ ರೈತರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ. ಇಂದಿನ ಕೃಷಿ ವೆಚ್ಚಕ್ಕೆ ಹೋಲಿಸಿದರೆ ಈ ಮೊತ್ತ ಯಾವುದಕ್ಕೂ ಸಾಲುವುದಿಲ್ಲ. ಒಂದು ಚೀಲ ಗೊಬ್ಬರ ಖರೀದಿಗೂ ಈ ಹಣ ಸಾಕಾಗುವುದಿಲ್ಲ ಎಂದು ರೈತರು ಹೇಳುತ್ತಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜತೆ ಮಾತನಾಡಿದ ರೈತ ಈರಣ್ಣ, ಮಳೆ ಬಾರದೆ ಬೆಳೆ ಕೈಕೊಟ್ಟಿತು. ಬಿತ್ತನೆಗೆ ಮಾಡಿದ ಖರ್ಚು ಕೂಡ ಬರಲಿಲ್ಲ. ಈಗ ಹಿಂಗಾರು ಬಿತ್ತನೆ ಮಾಡಬೇಕೆಂದರೆ ಕೈಯಲ್ಲಿ ಕಾಸಿಲ್ಲ. ಸರ್ಕಾರ ₹2,500 ಮೊದಲ ಹಂತದ ಪರಿಹಾರ ಕೊಡೋದಾಗಿ ಹೇಳಿದೆ. ಆದಷ್ಟು ಬೇಗ ನಮ್ಮ ಖಾತೆಗೆ ಹಣ ಹಾಕಲಿ ಎಂದು ಮನವಿ ಮಾಡಿದರು.

ರೈತ ಸಂಘಟನೆಯ ಮಲ್ಲಿಕಾರ್ಜುನ ಮಾತನಾಡಿ, “₹2,500 ಯಾವುದಕ್ಕೂ ಸಾಕಾಗುವುದಿಲ್ಲ. ಒಂದು ಚೀಲ ಗೊಬ್ಬರ ತೆಗೆದುಕೊಳ್ಳೋಕೂ ಸಾಲೋದಿಲ್ಲ. ರೈತರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಮೊದಲ ಹಂತದಲ್ಲೇ ಕನಿಷ್ಠ ₹10 ಸಾವಿರ ಪರಿಹಾರ ನೀಡಬೇಕು. ಬೆಳೆ ಬೆಳೆಸಲು ಸಾಲ ಮಾಡಿ ಹಣ ಹಾಕಿದ್ದಾರೆ. ಬೆಳೆ ಬಂದಿಲ್ಲ. ಈಗ ಮತ್ತೆ ಬಿತ್ತನೆ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ಕೈ ಹಿಡಿಯಬೇಕು” ಎಂದು ಆಗ್ರಹಿಸಿದರು.

ಈ ಕುರಿತು ರೈತ ಶಿವಾನಂದ ಮಾತನಾಡಿ, “ರಾಜ್ಯ ಸರ್ಕಾರ ಕೇಂದ್ರಕ್ಕೆ ₹11 ಸಾವಿರ ಕೋಟಿ ಕೇಳಿದೆ ಅಂತ ಹೇಳ್ತಾರೆ. ನಮ್ಮ ಸಂಸದರು ದೆಹಲಿಗೆ ಹೋಗಿ ಕೇಂದ್ರ ಸರ್ಕಾರವನ್ನು ಕೇಳಬೇಕು. ರೈತರ ಕಷ್ಟವನ್ನು ಹೇಳಿ ಪರಿಹಾರ ತರಬೇಕು. ಸುಮ್ಮನೆ ಇರಬಾರದು” ಎಂದರು.

ರಾಜಕಾರಣಿಗಳು ಕೇಂದ್ರ-ರಾಜ್ಯ ಅಂತ ಕಿತ್ತಾಡಿಸೋದು ಬೇಡ. ರೈತನ ಬೆಳೆ ಹೋಗಿದೆ. ಎರಡೂ ಸರ್ಕಾರ ಸೇರಿ ರೈತನನ್ನು ಉಳಿಸಬೇಕು. ನಮಗೆ ರಾಜಕೀಯ ಬೇಕಿಲ್ಲ. ಹಿಂಗಾರು ಬಿತ್ತನೆ ಮಾಡೋಕೆ ದುಡ್ಡು ಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರೈತನಿಗೆ ರಾಜಕೀಯವಲ್ಲ, ನೆರವು ಬೇಕು…

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಇದೀಗ ಹಿಂಗಾರು ಹಂಗಾಮು ಮತ್ತೊಂದು ಸವಾಲಾಗಿದೆ. ಬಿತ್ತನೆ ಮಾಡದಿದ್ದರೆ ಮುಂದಿನ ಆದಾಯದ ನಿರೀಕ್ಷೆಯೂ ಇಲ್ಲ. ಬಿತ್ತನೆ ಮಾಡಬೇಕಾದರೆ ಕೈಯಲ್ಲಿ ಹಣವಿಲ್ಲ.

ಹೀಗಾಗಿ ಸರ್ಕಾರದ ಪರಿಹಾರ ವಿಳಂಬವಾದಷ್ಟೂ ರೈತರ ಸಾಲದ ಹೊರೆ ಹೆಚ್ಚಾಗುವ ಆತಂಕವಿದೆ. ಸರ್ಕಾರ ಘೋಷಿಸಿದ ಪರಿಹಾರವನ್ನು ತಕ್ಷಣ ರೈತರ ಖಾತೆಗೆ ಜಮಾ ಮಾಡುವುದರ ಜತೆಗೆ, ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂಬುದು ರೈತರ ಆಶಯವಾಗಿದೆ.

ಬರದಿಂದ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ಘೋಷಿಸುವುದು ಮಾತ್ರ ಸಾಕಾಗುವುದಿಲ್ಲ. ಘೋಷಿಸಿದ ಹಣ ನಿಗದಿತ ಸಮಯದಲ್ಲಿ ರೈತರ ಖಾತೆಗೆ ತಲುಪಿದಾಗ ಮಾತ್ರ ಅದರ ಉದ್ದೇಶ ಈಡೇರುತ್ತದೆ.

ಹಿಂಗಾರು ಬಿತ್ತನೆ ಆರಂಭವಾಗಿರುವ ಈ ಸಂದರ್ಭದಲ್ಲಿ ರೈತರ ಖಾತೆಗೆ ಕನಿಷ್ಠ ₹2,500 ಪರಿಹಾರವನ್ನು ತಕ್ಷಣ ಜಮಾ ಮಾಡಬೇಕು. ಜತೆಗೆ ಕೇಂದ್ರದಿಂದ ಬರ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಪರಿಣಾಮಕಾರಿ ಪ್ರಯತ್ನ ನಡೆಸಬೇಕು. ಸಂಸದರು ಕೂಡ ಕೇಂದ್ರದ ಮುಂದೆ ರೈತರ ಸಮಸ್ಯೆಯನ್ನು ಪ್ರಸ್ತಾಪಿಸಿ ಪರಿಹಾರ ತರಲು ಒತ್ತಡ ಹಾಕಬೇಕು ಎಂಬುದು ರೈತರ ಆಗ್ರಹವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಆಯಿಷಾ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಎನ್ ಎಸ್ ಎಸ್ ದಿನಾಚರಣೆ...