ಬೆಳಗಾವಿ | ಗ್ರಾಮ ಪಂಚಾಯಿತಿಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ

Date:

Advertisements

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಗ್ರಾಪಂನ 15ನೇ ಹಣಕಾಸು ಅನುದಾನ, ನರೇಗಾ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳ ಕುರಿತು ಪಂಚಾಯಿತಿ ಸಿಬ್ಬಂದಿಗಳಿಂದ ಮಾಹಿತಿ ಪಡೆದು, ನಿಗದಿತ ಕಾಲಾವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಸೂಚಿಸಿದರು.

ಬಳಿಕ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕರ್ನಾಟಕದ ಗಡಿ ಭಾಗದ ದಡ್ಡಿ ಬಳಿಯ ಘಟಪ್ರಭಾ ನದಿಗೆ ಅಡ್ಡಲಾಗಿ ಇರುವ ಕಿರಿದಾದ ಸೇತುವೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗಿದೆ. ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ-ಶಾಲೆ ಕಟ್ಟಡಗಳನ್ನು ಪುನ‌ರ್ ನಿರ್ಮಿಸಲಾಗುವುದು ಎಂದರು.

Advertisements

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ನಾಯಕ ಅಧ್ಯಕ್ಷತೆ ವಹಿಸಿದ್ದರು. ಸಚಿವರ ಆಪ್ತ ಸಹಾಯಕ ದಯಾನಂದ ಪಾಟೀಲ, ಸದಸ್ಯರಾದ ನೀಲಕಂಠ ಮಠಪತಿ, ರಾಜು ಗಡ್ಕರಿ ನಸೀಮಾ ಬುಡ್ಡನವರ, ಪಿತಾಂಬರ್ ಇಂಗವಲೆ, ಮುಖಂಡರಾದ ಮಂಜು ಕಾಂಬಳೆ, ವಿಶ್ವನಾಥ ಪಾಟೀಲ, ಸಂದೀಪ ಮಾನೆ, ಕಾರ್ಯದರ್ಶಿ ಯಾಸೀನ್ ಅರಳಿ, ಗ್ರಾಪಂ ಸಿಬ್ಬಂದಿಗಳಾದ ಬಸವರಾಜ ಜಾಂಬೋಟಿ, ಸಂತೋಷ ಹೊಳೆಪ್ಪಗೋಳ, ನರೇಗಾ ಸಿಬ್ಬಂದಿ ಬಸವರಾಜ ಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಇಂದು ತಂಪು ವಾತಾವರಣ – ಮಧ್ಯಮ ಮಳೆಯ ಮುನ್ಸೂಚನೆ

ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಆವರಿಸಿಕೊಂಡಿದ್ದು, ಹವಾಮಾನ ಇಲಾಖೆ ಮಧ್ಯಮ ಮಳೆಯ...

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

Download Eedina App Android / iOS

X