ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಹಕ್ಕು ಉಲ್ಲಂಘನೆ ಪ್ರಕರಣ ದಾಖಲಿಸಬೇಕು ಎಂದು ಮಹಾರಾಷ್ಟ್ರದ ಹಾಥಕಣಗಲೆ ಲೋಕಸಭಾ ಕ್ಷೇತ್ರದ ಸಂಸದ ಧೈರ್ಯಶೀಲ್ ಮಾನೆ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮರಾಠಿಗರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಆಯೋಜಿಸಿದ್ದ ‘ಕರಾಳ ದಿನ’ಸ ಆಚರಣೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ, ಕರ್ನಾಟಕ ಗಡಿಯಲ್ಲಿ ಅಕ್ರಮ ನೋಟೀಸ್ ನೀಡಿ ಪ್ರವೇಶ ತಡೆಯಲಾಗಿದೆ ಎಂದು ಮಾನೆ ಆರೋಪಿಸಿದ್ದಾರೆ. ನವೆಂಬರ್ 1, 2025ರಂದು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರಯಾಣಿಸುತ್ತಿದ್ದಾಗ, ಬೆಳಗಾವಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿರುವ ಐಎಎಸ್ ಅಧಿಕಾರಿ ಮೊಹಮ್ಮದ್ ರೋಷನ್ ಅವರ ಆದೇಶದ ಮೇರೆಗೆ ಪೊಲೀಸ್ ಆಡಳಿತವು ಗಡಿ ಪ್ರವೇಶವನ್ನು ನಿರಾಕರಿಸಿದೆ ಎಂದು ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ನಾನು ದೇಶದ ಜನರಿಂದ ಆಯ್ಕೆಯಾದ ಸಂಸದನಾಗಿದ್ದು, ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಇಂತಹ ಸಂದರ್ಭದಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸದಂತೆ ತಡೆಯುವುದು ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಎಂದು ಮಾನೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಐಎಎಸ್ ಅಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಹಕ್ಕು ಉಲ್ಲಂಘನೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಲೋಕಸಭಾ ಸ್ಪೀಕರ್ ಅವರಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಸಂಸದ ಮಾನೆಯಿಂದ ಲೋಕಸಭಾ ಸ್ಪೀಕರ್ ಗೆ ದೂರು
- Advertisement -
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ



