ಬೆಳಗಾವಿ ದಕ್ಷಿಣದಲ್ಲಿ 2,000 ಮತದಾರರ ಹೆಸರು ಡಿಲೀಟ್: ಶಾಸಕ ಅಭಯ್ ಪಾಟೀಲ್‌ ವಿರುದ್ಧ ಬಿ.ಕೆ. ಹರಿಪ್ರಸಾದ್ ಆರೋಪ

Date:

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಸುಮಾರು 2,000 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್‌ ಮಾಡುವಂತೆ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮತದಾರರ ಹೆಸರುಗಳನ್ನು ಡಿಲೀಟ್ ಮಾಡುವಂತೆ ಶಾಸಕ ಅಭಯ್ ಪಾಟೀಲ್‌ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಬಿಡುಗಡೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

‘ಮತದಾರರ ಹೆಸರು ಡಿಲೀಟ್ ಮಾಡುವಂತೆ ಪತ್ರ ಬರೆಯಲು ಇವರು ಯಾರು?’ ಎಂದು ಪ್ರಶ್ನಿಸಿದ ಹರಿಪ್ರಸಾದ್‌, ಶಾಸಕರು ಕಾನೂನು ಮೀರಿ ಸಾಮೂಹಿಕವಾಗಿ ಮತದಾರರ ಹೆಸರುಗಳನ್ನು ತೆಗೆದುಹಾಕಲು ಮನವಿ ಮಾಡಿದ್ದಾರೆ ಎಂದು ಆರೋಪಿಸಿದರು.

ಶಾಸಕರು ಚುನಾವಣಾ ಆಯೋಗಕ್ಕೆ ಬರೆದಿದ್ದಾರೆ ಎನ್ನಲಾದ ಪತ್ರಕ್ಕೆ ಸಂಬಂಧಿಸಿದಂತೆ, ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಯು ಸಾಮೂಹಿಕವಾಗಿ (ಬಲ್ಕ್) ಮತದಾರರ ಹೆಸರು ಡಿಲೀಟ್ ಮಾಡಲು ಅರ್ಜಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವುದಾಗಿ ಹರಿಪ್ರಸಾದ್ ಹೇಳಿದರು.

ಶಾಸಕ ಅಭಯ್ ಪಾಟೀಲ್‌ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ವಿಚಾರವನ್ನು ಚುನಾವಣಾ ಆಯೋಗದ ಗಮನಕ್ಕೆ ತಂದು ದೂರು ಸಲ್ಲಿಸಲಾಗುವುದು ಎಂದು ಬಿ.ಕೆ. ಹರಿಪ್ರಸಾದ್‌ ತಿಳಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...