ಇಂದಿರಾ ಕ್ಯಾಂಟೀನ್ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಗೆ ಪೀರು ಎಸ್. ತಳವಾರ ಆಯ್ಕೆ: ಊಟ–ಉಪಹಾರದ ಮಿತಿ ಹೆಚ್ಚಳಕ್ಕೆ ಭರವಸೆ

Date:

ಇಂದಿರಾ ಕ್ಯಾಂಟೀನ್ ಯೋಜನೆಯ ಮೇಲ್ವಿಚಾರಣೆ, ಗುಣಮಟ್ಟದ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಪೀರು ಎಸ್. ತಳವಾರ ಅವರಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಪೀರು ಎಸ್. ತಳವಾರ ಅವರು, ಶಾಸಕ ಅಶೋಕ ಪಟ್ಟಣವರ ಅವರು ಸೂಚಿಸಿದಂತೆ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ಇಂದಿರಾ ಕ್ಯಾಂಟೀನ್ ಸದಸ್ಯನಾಗಿ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವುದು ತಮ್ಮ ಕರ್ತವ್ಯ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1001142562

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಇಂದಿರಾ ಕ್ಯಾಂಟೀನ್‌ನಲ್ಲಿ ದಿನಕ್ಕೆ 300 ಪ್ಲೇಟ್ ಉಪಹಾರ ಹಾಗೂ ಊಟ ಮಾತ್ರ ಲಭ್ಯವಿದ್ದು, ಈ ಪ್ರಮಾಣವನ್ನು 500 ಪ್ಲೇಟ್‌ಗೆ ಹೆಚ್ಚಿಸುವ ಕುರಿತು ಶಾಸಕ ಅಶೋಕ ಪಟ್ಟಣವರ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದೇ ಇಂದಿರಾ ಕ್ಯಾಂಟೀನ್ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಯ ಇನ್ನೊರ್ವ ಸದಸ್ಯರಾದ ಸತೀಶ ಜೀನಗಾ ಅವರು ಮಾತನಾಡಿ, ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ಕ್ಯಾಂಟೀನ್‌ಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಹೆಚ್ಚಿಸಲಾಗುವುದು. ಜೊತೆಗೆ ಉಪಹಾರ ಮತ್ತು ಊಟದ ಮಿತಿಯನ್ನು 300 ರಿಂದ 500 ಪ್ಲೇಟ್‌ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇಂದಿರಾ ಕ್ಯಾಂಟೀನ್ ಸದಸ್ಯರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...