ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸ್ಲಂ ಜನಾಂದೋಲನದಿಂದ ಬೆಳಗಾವಿಯಲ್ಲಿ ಪ್ರತಿಭಟನಾ ಸಭೆ

Date:

ವಸತಿ ಸಚಿವರಿಗೆ ಘೇರಾವ್‌ – ಐದು ನಿರ್ಣಯಗಳಿಗೆ ಒಪ್ಪಿಗೆ

- Advertisement -

ರಾಜ್ಯ ಸರ್ಕಾರ ಸ್ಲಂ ನಿವಾಸಿಗಳ ಸಮಸ್ಯೆಗಳತ್ತ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯ ವತಿಯಿಂದ ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಚಳಿಗಾಲದ ವಿಧಾನಮಂಡಲ ಅಧಿವೇಶನದ ಭಾಗವಾಗಿ ಸುವರ್ಣಸೌಧದ ಎದುರು ವಸತಿ ಸಚಿವ ಜಮೀರ್‌ ಅಹಮದ್‌ ಅವರಿಗೆ ಘೇರಾವ್‌ ಹಾಕಿ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಸಂಚಾಲಕರಾದ ಎ. ನರಸಿಂಹಮೂರ್ತಿ, ನಗರ ಪ್ರದೇಶಗಳ ಸ್ಲಂಗಳಲ್ಲಿ ವಾಸಿಸುವ ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಅಲೆಮಾರಿ ಸಮುದಾಯಗಳ ಜನರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದರು. 2023ರ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ. ಸ್ಲಂ ನಿವಾಸಿಗಳಿಗೆ ಭೂಮಿ ಹಾಗೂ ವಸತಿ ಖಾತ್ರಿ ನೀಡದೆ ಸಾಮಾಜಿಕ ನ್ಯಾಯದಿಂದ ವಂಚಿಸಲಾಗುತ್ತಿದೆ ಎಂದರು.

2026–27ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಬೇಕು, ಒನ್‌ ಟೈಮ್‌ ಗ್ರಾಂಟ್‌ ನೀಡಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಹಾಗೂ ಖಾಸಗಿ ಕೊಳಚೆ ಪ್ರದೇಶಗಳ ಸ್ವಾಧೀನಕ್ಕೆ ಅನುದಾನ ನೀಡಬೇಕೆಂದು ಅವರು ಒತ್ತಾಯಿಸಿದರು.

ನಂತರ ಕಿತ್ತೂರು ವಿಭಾಗದ ಸಂಚಾಲಕರಾದ ಇಮ್ತಿಯಾಜ್‌ ಆರ್‌. ಮಾನ್ವಿ ಅವರು ಸಭೆಯ ನಿರ್ಣಯಗಳನ್ನು ಮಂಡಿಸಿದರು. 2023ರ ಪ್ರಣಾಳಿಕೆಯಂತೆ ಉಚಿತ ಭೂಮಿ ಮತ್ತು ವಸತಿ ಖಾತ್ರಿ, ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದ ಸುತ್ತೋಲೆ ವಾಪಸ್‌, ಬಜೆಟ್‌ನಲ್ಲಿ ಸಮರ್ಪಕ ಅನುದಾನ, ನಗರ ಪ್ರದೇಶಗಳಲ್ಲಿ ಲ್ಯಾಂಡ್‌ ಬ್ಯಾಂಕ್‌ ಯೋಜನೆ ಜಾರಿ ಹಾಗೂ ವಸತಿ ಹಕ್ಕು ಜಾರಿಗೆ ತರುವಂತೆ ಐದು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯ ಚಂದ್ರಮ್ಮ, ವಿವಿಧ ಜಿಲ್ಲೆಗಳ ಸ್ಲಂ ಜನಾಂದೋಲನ ಸಂಚಾಲಕರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18...