ರಾಜ್ಯದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದರೂ, ಮುಂದಿನ ಎರಡು ದಿನ ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 18ರಂದು ಬೆಳಗಾವಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 19ರಂದು ಕೂಡ ಜಿಲ್ಲೆಯ ಹಲವು ಭಾಗಗಳಲ್ಲಿ ಇದೇ ರೀತಿಯ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.
ಬೆಳಗಾವಿ ಜತೆಗೆ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಈ ಅವಧಿಯಲ್ಲಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.
This video cannot be played in your browser. Open the video directly




