ಬೆಳಗಾವಿ | ರಾಣಿ ಚನ್ನಮ್ಮ ವಿ.ವಿ ಕ್ಯಾಂಪಸ್‌ ರಸ್ತೆ: ರೈತರ ಹಿತಾಸಕ್ತಿಗೆ ಧಕ್ಕೆ ಇಲ್ಲ – ಕುಲಸಚಿವರ ಸ್ಪಷ್ಟನೆ

Date:

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗುಡ್ಡದ ಮೇಲೆ ನಿರ್ಮಾಣವಾಗುತ್ತಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ನಿಯಮಾನುಸಾರ ನಡೆಯುತ್ತಿದ್ದು, ರೈತರ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುವ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ ಸ್ಪಷ್ಟಪಡಿಸಿದ್ದಾರೆ.

- Advertisement -

ಬೇಕಾಬಿಟ್ಟಿಯಾಗಿ ರಸ್ತೆ ನಿರ್ಮಾಣ ನಡೆಯುತ್ತಿದೆ ಎಂಬ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಮುಂಚೆಯೇ ಅಸ್ತಿತ್ವದಲ್ಲಿದ್ದ ಸರ್ಕಾರದ ರಸ್ತೆಯನ್ನೇ ಮರುನಿರ್ಮಿಸಲಾಗುತ್ತಿದೆ. ರೈತರೊಂದಿಗೆ ಸಮಾಲೋಚನೆ ನಡೆಸಿಯೇ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದು ಏಕಪಕ್ಷೀಯ ನಿರ್ಧಾರವಲ್ಲ ಎಂದು ಅವರು ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ನೂತನ ಮುಖ್ಯ ಆವರಣಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅನುದಾನ ಒದಗಿಸಿದ್ದು, ಉನ್ನತ ಶಿಕ್ಷಣ ಸಚಿವರು ಹಾಗೂ ಸ್ಥಳೀಯ ಗ್ರಾಮೀಣ ಶಾಸಕರೂ ವಿಶೇಷ ↓ ಪ್ರಯತ್ನ ನಡೆಸಿದ್ದಾರೆ. ಲೋ ಕಾಮಗಾರಿ ನಡೆಯುತ್ತಿದ್ದು, ಗಯೋಗಿ ಇಲಾಖೆ ಮೂಲಕ ಯ ಇಲಾಖೆಯ ಗ್ರಾಮ ನಕಾಶೆಯ ದಾಖಲೆಗಳ ಪ್ರಕಾರ ಹಾಗೂ ರೈತರ
ಕೋರಿಕೆಯಂತೆ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಸ್ತುತ ಲೋಕೋಪಯೋಗಿ ಇಲಾಖೆಯಿಂದ ನೇಮಿಸಲಾದ ಗುತ್ತಿಗೆದಾರರು ರಸ್ತೆಯನ್ನು ಸಿ.ಸಿ. ದರ್ಜೆಗೆ ಉನ್ನತೀಕರಿಸಲು ತಯಾರಿ ನಡೆಸಿದ್ದಾರೆ. ಸರ್ಕಾರಿ ರಸ್ತೆಯ ಅಳತೆ ಹಾಗೂ ಗಡಿಗಳನ್ನು ಗುರುತಿಸಿ, ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ರೈತರ ಒತ್ತಾಯದಂತೆ ಕಂದಾಯ ಇಲಾಖೆಯ ದಾಖಲೆಗಳನ್ವಯ ಅಳತೆ ಕಾರ್ಯ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಕ್ಯಾಂಪಸ್‌ನಲ್ಲಿ ನೀರಿನ ಮೂಲ ಇಲ್ಲದ ಹಿನ್ನೆಲೆಯಲ್ಲಿ, ಸರ್ಕಾರದ ರಸ್ತೆಯ ಇಕ್ಕೆಲಗಳಲ್ಲಿ ನೀರಿನ ಲಭ್ಯತೆ ಬಗ್ಗೆ ಮಾಹಿತಿ ದೊರೆತ ಕಾರಣ ಬೋರ್‌ವೆಲ್ ಕೊರೆಯಲಾಗಿದೆ. ಅಗತ್ಯ ನೀರು ಲಭ್ಯವಾಗದ ಹಿನ್ನೆಲೆಯಲ್ಲಿ, ನೀರಿನ ಮೂಲ ಹೊಂದಿರುವ ರೈತರಿಂದ ನೀರನ್ನು ಪಡೆದು ಪೈಪ್‌ಲೈನ್ ಮೂಲಕ ನೀರು ಪೂರೈಸಲಾಗುತ್ತಿದೆ. ಕಾಮಗಾರಿ ವೇಳೆ ರೈತರ ಪೈಪ್‌ಲೈನ್‌ಗಳಿಗೆ ಹಾನಿಯಾಗದಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಯಾವುದೇ ತೊಂದರೆಯಾಗಿದ್ದರೆ ವಿಶ್ವವಿದ್ಯಾಲಯವೇ ಸರಿಪಡಿಸಲಿದೆ ಎಂದು ತಿಳಿಸಿದ್ದಾರೆ.

ವಾಹನಗಳ ಓಡಾಟದಿಂದ ಬೆಳೆಗಳಿಗೆ ಧೂಳು ಬೀಳುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ವಾಹನಗಳು ಗಂಟೆಗೆ 20 ಕಿ.ಮೀ ವೇಗ ಮೀರದಂತೆ ಸೂಚನೆ ನೀಡಲಾಗಿದೆ. ರಸ್ತೆಯ ಮೇಲೆ ನಿಯಮಿತವಾಗಿ ನೀರು ಸಿಂಪಡಿಸಲು ಹಾಗೂ ಮೇಲ್ವಿಚಾರಣೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಗತ್ಯ ಸೂಚನಾ ಫಲಕಗಳನ್ನೂ ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.

ಯಾವುದೇ ಸಮಸ್ಯೆಗಳಿದ್ದರೆ ರೈತರು ಎಸ್ಟೇಟ್‌ ಕಚೇರಿ ಅಧೀಕ್ಷಕ ಅಧಿಕಾರಿ (8147981201) ಅಥವಾ ಸಂಬಂಧಿತ ಅಧಿಕಾರಿಯನ್ನು (9945726407) ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಜ.19ರಂದು ನೂತನ ಕ್ಯಾಂಪಸ್‌ನಲ್ಲಿ ಕರೆದಿರುವ ಸಭೆಯನ್ನು ತಮ್ಮ ಹೊಲದಲ್ಲೇ ನಡೆಸಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಹೊಲದಲ್ಲೇ ಸಭೆ ನಡೆಸಿದರೆ ಮಾತ್ರ ತಮ್ಮ ಸಮಸ್ಯೆಗಳ ನೈಜತೆ ಅಧಿಕಾರಿಗಳಿಗೆ ಅರ್ಥವಾಗುತ್ತದೆ. ಇಲ್ಲದಿದ್ದರೆ ಸಭೆ ಬಹಿಷ್ಕರಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...