ಬೆಳಗಾವಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ವಿಮಾನ ಸೇವೆ ಆರಂಭಕ್ಕೆ ಮನವಿ

Date:

ಕೇಂದ್ರ ವಿಮಾನಯಾನ ಸಚಿವರಾದ ಕೆ. ರಾಮಮೋಹನ ನಾಯ್ಡು ಅವರನ್ನು ಭೇಟಿಯಾದ ನಿಯೋಗವು, ಬೆಳಗಾವಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಪ್ರಮುಖ ನಗರಗಳಿಗೆ ಇಂಡಿಗೋ ಹಾಗೂ ಏ‌ರ್ ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಗಳ ಮೂಲಕ ವಿಮಾನಯಾನ ಸೇವೆ ಒದಗಿಸುವ ಕುರಿತು ಚರ್ಚಿಸಿ ಸಂಸದ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದ್ದಾರೆ.

- Advertisement -

ಬೆಳಗಾವಿ ನಗರವು ಉದ್ಯಮಿಕರಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದ್ದು, ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಅವಧಿ ಮುಕ್ತಾಯವಾದ ಬಳಿಕ ಹಲವು ನಗರಗಳಿಗೆ ಇದ್ದ ವಿಮಾನ ಸೇವೆ ರದ್ದಾದ ಪರಿಣಾಮ ಉದ್ಯಮಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಸಚಿವರ ಗಮನಕ್ಕೆ ತರಲಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಹಿನ್ನೆಲೆಯಲ್ಲಿ ಮುಂಬೈ, ಚೆನ್ನೈ, ಸುರತ್, ಪುಣೆ ಸೇರಿದಂತೆ ಪ್ರಮುಖ ನಗರಗಳಿಗೆ ಇಂಡಿಗೋ ಮತ್ತು ಏ‌ರ್ ಇಂಡಿಯಾ ಸಂಸ್ಥೆಗಳ ಮೂಲಕ ವಿಮಾನಯಾನ ಸೇವೆ ಆರಂಭಿಸಲು ಸಂಬಂಧಿತ ಸಂಸ್ಥೆಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಕೋರಲಾಯಿತು.

ಇದಲ್ಲದೆ ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣಗಳನ್ನು ಕ್ರಮವಾಗಿ ಕಿತ್ತೂರ ರಾಣಿ ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಕವಿ ಡಾ. ಕೆ.ವಿ. ಪುಟ್ಟಪ್ಪ (ಕುವೆಂಪು) ಹಾಗೂ ಜಗಜ್ಯೋತಿ ಬಸವೇಶ್ವರ ಏರಪೋರ್ಟ್ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಮನವಿ ಮಾಡಲಾಯಿತು.

ಪ್ರಸ್ತಾಪಿತ ವಿಷಯಗಳ ಕುರಿತು ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಅವರು ಭರವಸೆ ನೀಡಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...