2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶಿಷ್ಯ ವೇತನಕ್ಕಾಗಿ ಎಸ್‌ಎಸ್‌ಪಿ, ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಹೊಸದಾಗಿ ದಾಖಲಾದ/ಮುಂದುವರೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಎಸ್‌ಎಸ್‌ಪಿ. ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
2026-2027 ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ನಿವೇಶನ ಹೊಂದಿರುವ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಕಚೇರಿಯಲ್ಲಿ ಅರ್ಜಿ ಪಡೆದು ಇದೇ 31ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.




