ಬೆಳಗಾವಿ ನಗರದ ಕೊಲ್ಲಾಪುರ ವೃತ್ತದ ಬಳಿ ಇರುವ ಪಾಳು ಕಟ್ಟಡವೊಂದರಲ್ಲಿ ಭಿಕ್ಷುಕನ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶವವು ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ನಾಲ್ಕು ರಿಂದ ಐದು ದಿನಗಳ ಹಿಂದೆ ಸಾವು ಸಂಭವಿಸಿದ್ದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆಯ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಸಾವು ಹೇಗೆ ಸಂಭವಿಸಿದೆ ಎಂಬುದು ಸ್ಪಷ್ಟವಾಗಿಲ್ಲದ ಹಿನ್ನೆಲೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಲಾಗಿದೆ.