ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಬೆಳಗಾವಿ ಜಿಲ್ಲೆಯ ಮೂವರು ಪ್ರಮುಖ ನಾಯಕರಿಗೆ ಹೈಕಮಾಂಡ್ ನೀಡಿದೆ.
ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯನ್ನು ಸಚಿವ ಸತೀಶ ಜಾರಕಿಹೊಳಿ ಅವರಿಗೆ ವಹಿಸಲಾಗಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸಿ ಗೆಲುವು ಸಾಧಿಸುವ ಜವಾಬ್ದಾರಿ ಅವರ ಮೇಲಿದೆ.
ಇದೇ ವೇಳೆ, ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ನೀಡಲಾಗಿದೆ. ಅವರು ಕಾರ್ಯಕರ್ತರನ್ನು ಸಕ್ರಿಯಗೊಳಿಸಿ ಪ್ರಚಾರ ಕಾರ್ಯವನ್ನು ಮುನ್ನಡೆಸಲಿದ್ದಾರೆ.
ಇನ್ನೂ, ಈ ಎರಡೂ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಮಾಜಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ.
ಇನ್ನೂ, ಈ ಎರಡೂ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಮಾಜಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ತನ್ನ ಹಿಡಿತವನ್ನು ಬಲಪಡಿಸಲು ಈ ನೇಮಕಾತಿಗಳು ಮಹತ್ವದ್ದಾಗಿವೆ.