ವಿದೇಶದಲ್ಲಿ ಸೈಬ‌ರ್ ವಂಚಕರ ಒತ್ತೆಯಾಳಾಗಿದ್ದ ಬೆಳಗಾವಿಯ ಮೂವರು ಯುವಕರ ರಕ್ಷಣೆ

Date:

ವಿದೇಶದಲ್ಲಿ ಕೈ ತುಂಬ ಸಂಬಳದ ಕೆಲಸ ನೀಡುವ ನೆಪದಲ್ಲಿ ಸೈಬ‌ರ್ ವಂಚಕರು ಬೆಳಗಾವಿಯ ಮೂವರು ಯುವಕರನ್ನು ಕಾಂಬೋಡಿಯಾಗೆ ಕರೆದೊಯ್ದು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿಯ ಆಕಾಶ್ ಕಾಗಣಿಕರ, ಓಂಕಾರ ಲೋಖಾಂಡೆ ಹಾಗೂ ಸಂಸ್ಕಾರ ಲೋಖಾಂಡೆ ಎಂಬ ಯುವಕರು ಸುಮಾರು ಒಂದು ತಿಂಗಳ ಕಾಲ ಸೈಬ‌ರ್ ವಂಚನಾ ಕೇಂದ್ರದಲ್ಲಿ ನರಕಯಾತನೆ ಅನುಭವಿಸಿದ್ದಾರೆ.

- Advertisement -

ಹಾಂಕಾಂಗ್‌ನಲ್ಲಿ ತಿಂಗಳಿಗೆ 1 ಲಕ್ಷ ರೂ. ಸಂಬಳದ ಕೆಲಸ ನೀಡುವುದಾಗಿ ನಂಬಿಸಿ, ಬೆಳಗಾವಿ ಮೂಲದ ಏಜೆಂಟ್‌ಗಳ ಮೂಲಕ ಯುವಕರನ್ನು ವಿದೇಶಕ್ಕೆ ಕಳುಹಿಸಲಾಗಿತ್ತು. ಆದರೆ ಹಾಂಕಾಂಗ್‌ಗೆ ಬದಲಾಗಿ ಆರೋಪಿಗಳು ಅವರನ್ನು ಕಾಂಬೋಡಿಯಾಗೆ ಸಾಗಿಸಿ, ವಾಟ್ಸಪ್ ಮತ್ತು ಇನ್‌ಸ್ಟಾಗ್ರಾಂ ಮೂಲಕ ಸೈಬ‌ರ್ ವಂಚನೆ ನಡೆಸಲು ಬಲವಂತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲಸ ಮಾಡಲು ನಿರಾಕರಿಸಿದಾಗ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಕುರಿತು ಆಕಾಶ್ ಹಾಗೂ ಲೋಖಾಂಡೆ ಸಹೋದರರ ತಂದೆ ಬೆಳಗಾವಿ ಸಿಇಎನ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್‌ ಆಯುಕ್ತರು, ಕಾಂಬೋಡಿಯಾದಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಮಾಹಿತಿ ನೀಡಿದ್ದರು. ಅದರಂತೆ ಕಾಂಬೋಡಿಯಾ ಪೊಲೀಸರು ಸೈಬ‌ರ್ ವಂಚನಾ ಕೇಂದ್ರದ ಮೇಲೆ ದಾಳಿ ನಡೆಸಿ, ಭಾರತ ಸೇರಿದಂತೆ ವಿವಿಧ ದೇಶಗಳ 50ಕ್ಕೂ ಹೆಚ್ಚು ಯುವಕರನ್ನು ರಕ್ಷಿಸಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಜೀವಂತ ರೈತನಿಗೆ ಮರಣ ಪ್ರಮಾಣಪತ್ರ: ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಈ ಕಾರ್ಯಾಚರಣೆ ಬೆಳಗಾವಿ ಸಿಇಎನ್ ಠಾಣೆಯ ಇನ್ಸ್‌ಪೆಕ್ಟ‌ರ್ ಜೆ.ಎಂ. ಕಾಲಿಮಿರ್ಚಿ ನೇತೃತ್ವದ ತಂಡದ ನಿರಂತರ ಪ್ರಯತ್ನದಿಂದ ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸುರೇಶ್ ಹುಂದ್ರೆ, ಆಸೀಫ್ ಅಲ್ವಾನ್‌ ಹಾಗೂ ಜಾರ್ಖಂಡ್ ಮೂಲದ ಅಮಿತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...