ಬೆಳಗಾವಿ : ಮಲ್ಲಣ್ಣ ಯಾದವಾಡರ ಗೆಲುವಿನ ಸಂಭ್ರಮದಲ್ಲೇ ದುರಂತ : ಶಾಸಕ ಅಶೋಕ್ ಪಟ್ಟಣ ಆಪ್ತ ಹೃದಯಾಘಾತದಿಂದ ಸಾವು

Date:

ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ತಾಲೂಕಿನಿಂದ ನಿರ್ದೇಶಕರಾಗಿ ಮಲ್ಲಣ್ಣ ಯಾದವಾಡ ಗೆಲುವು ಸಾಧಿಸಿದ ಸಂಭ್ರಮದ ಮಧ್ಯೆಯೇ ದುರಂತ ಸಂಭವಿಸಿದೆ. ಶಾಸಕ ಅಶೋಕ್ ಪಟ್ಟಣ ಅವರ ಆಪ್ತ ಹಾಗೂ ಪಿಕೆಪಿಎಸ್ ಮಾಜಿ ಅಧ್ಯಕ್ಷ ಗಿರಿಯಪ್ಪ ಗಂಟೋಟಿ (40) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

- Advertisement -

ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದ ನಿವಾಸಿಯಾಗಿದ್ದ ಗಿರಿಯಪ್ಪ ಅವರು, ಮಲ್ಲಣ್ಣ ಯಾದವಾಡ ಪರವಾಗಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸಕ್ರಿಯ ಪ್ರಚಾರ ನಡೆಸಿದ್ದರು. ಶಾಸಕ ಅಶೋಕ್ ಪಟ್ಟಣ ಅವರೊಂದಿಗೆ ಪಾದಯಾತ್ರೆ, ಸಭೆ ಹಾಗೂ ಕಾರ್ಯಕರ್ತರ ಸಂಭ್ರಮದಲ್ಲಿ ಭಾಗವಹಿಸಿದ್ದ ಗಿರಿಯಪ್ಪ ಅವರು, ಫಲಿತಾಂಶ ಘೋಷಣೆಯಾದ ದಿನ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಆದರೆ ರಾತ್ರಿ ತಡರಾತ್ರಿ ಅವರಿಗೆ ಅಸ್ವಸ್ಥತೆ ಉಂಟಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ.

ಈ ದುರ್ಘಟನೆಯಿಂದ ರಾಮದುರ್ಗ ಮತ್ತು ಬೆಳಗಾವಿ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಗಿರಿಯಪ್ಪ ಅವರ ಅಕಾಲಿಕ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮೃತರ ಕುಟುಂಬದವರನ್ನು ಶಾಸಕರಾದ ಅಶೋಕ್ ಪಟ್ಟಣ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಭೇಟಿ ಮಾಡಿ ಸಾಂತ್ವನ ನೀಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...