ನನ್ನ ಮೇಲೆ ನಂಬಿಕೆ ಇಡಿ ಸರ್ಕಾರ ನಿಮ್ಮ ಬೇಡಿಕೆ ಈಡೇರುಸುತ್ತದೆ ಎಂದ ಜಿಲ್ಲಾಧಿಕಾರಿಗಳು: ರೈತರ ಪಾದಯಾತ್ರೆ ತಾತ್ಕಾಲಿಕ ಸ್ಥಗಿತ

Date:

ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ಬಂದಿದೆ ಎಂದ ಮೊಹಮ್ಮದ್ ರೋಷನ್; ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟದ ಎಚ್ಚರಿಕೆ

- Advertisement -

ನನ್ನ ಮೇಲೆ ನಂಬಿಕೆ ಇಡಿ, ರೈತರ ಬೇಡಿಕೆಗಳು ಈಡೇರುತ್ತವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಪಾದಯಾತ್ರೆಯನ್ನು ರೈತ ಮುಖಂಡರು ಅಕ್ಟೋಬ‌ರ್ 18ರ ರಾತ್ರಿ 11.30ಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡುವ ಮೂಲಕ ಆರಂಭಗೊಂಡಿದ್ದ ಕಬ್ಬು ಬೆಳೆಗಾರರ ಹೋರಾಟ, ಹಲವು ದಿನಗಳ ಪಾದಯಾತ್ರೆಯ ಬಳಿಕ ಕಿತ್ತೂರು ಮಾರ್ಗವಾಗಿ ತೇಗೂರ ಗ್ರಾಮ ತಲುಪಿತ್ತು. ಅಲ್ಲಿ ರೈತರು ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ ಬೆಳಗಾವಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ಅಧಿಕಾರಿಗಳು ಆಗಮಿಸಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆ ರಾತ್ರಿ 11.30ಕ್ಕೆ ಅಂತ್ಯಗೊಂಡಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕೇಂದ್ರ ಸರ್ಕಾರದಿಂದ ಸಂದೇಶ ಬಂದಿದ್ದು, ರೈತರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ದೊರೆತಿದೆ ಎಂದು ತಿಳಿಸಿದರು. ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳ, ಎಥನಾಲ್ ಖರೀದಿ ಹಾಗೂ ಸಕ್ಕರೆ ಖರೀದಿ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಸ್ಪಂದಿಸಲಿದೆ ಎಂದು ಹೇಳಿದರು.

ನನ್ನ ಮೇಲೆ ನಂಬಿಕೆ ಇಡಿ. ನಾನು ನಿಮ್ಮ ಜಿಲ್ಲಾಧಿಕಾರಿ. ರೈತರ ಬೇಡಿಕೆಗಳು ಈಡೇರುತ್ತವೆ ಎಂದು ಮನವಿ ಮಾಡಿ, ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ರೈತ ಮುಖಂಡರನ್ನು ಕೋರಿದರು.

ಇದಾದ ಬಳಿಕ ರೈತ ಮುಖಂಡರಾದ ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿ ಸೇರಿದಂತೆ ಇತರ ಮುಖಂಡರು ಚರ್ಚೆ ನಡೆಸಿದರು. ಸರ್ಕಾರದ ಪರವಾಗಿ ಜಿಲ್ಲಾಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಬೇಡಿಕೆಗಳು ಈಡೇರುವವರೆಗೆ ಯಾವುದೇ ಕಾರಣಕ್ಕೂ ಸಕ್ಕರೆ ಮಾರಾಟ ಮಾಡಬಾರದು ಎಂದು ಒತ್ತಾಯಿಸಿದರು.

ರೈತರ ಅನುಮತಿ ಇಲ್ಲದೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು ಎಂದು ರೈತ ಮುಖಂಡರು ತಿಳಿಸಿದರು.

ಜಿಲ್ಲಾಧಿಕಾರಿಗಳ ಭರವಸೆಯನ್ನು ಪರಿಗಣಿಸಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರೈತರು ನಿರ್ಧರಿಸಿದರು. ಆದರೆ, ಬೇಡಿಕೆಗಳು ಈಡೇರದಿದ್ದರೆ ಮತ್ತೆ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹತ್ತರಗಿ ರಾಷ್ಟ್ರೀಯ ಹೆದ್ದಾರಿ ಬಂದ್‌ನಿಂದ ಆರಂಭಗೊಂಡಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸದ್ಯಕ್ಕೆ ತಾತ್ಕಾಲಿಕ ವಿರಾಮ ದೊರೆತಿದೆ. ಇದೀಗ ‘ನನ್ನ ಮೇಲೆ ನಂಬಿಕೆ ಇಡಿ’ ಎಂಬ ಜಿಲ್ಲಾಧಿಕಾರಿಗಳ ಭರವಸೆ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತದೆ ಎಂಬುದರ ಮೇಲೆ ರೈತರ ಮುಂದಿನ ಹೋರಾಟದ ನಡೆ ನಿರ್ಧಾರವಾಗಲಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...