ಕೇಂದ್ರ ಬಜೆಟ್ | ಉತ್ತರ ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನು ಘೋಷಿಸಿಲ್ಲ: ಪ್ರಿಯಾಂಕಾ ಜಾರಕಿಹೊಳಿ

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಒಂದೇ ಒಂದು ಯೋಜನೆಯನ್ನೂ ಘೋಷಿಸಿಲ್ಲ ಎಂದು ಚಿಕ್ಕೋಡಿ ಲೋಕಸಭಾ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಟೀಕಿಸಿದ್ದಾರೆ.

- Advertisement -

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ನಡುವಿನ ಹೈಸ್ಪೀಡ್ ರೈಲು ಕಾರಿಡಾ‌ರ್ ಅಭಿವೃದ್ಧಿಗೆ ಘೋಷಣೆ ಮಾಡಿರುವುದು ಸ್ವಾಗತಾರ್ಹವಾದರೂ, ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಹೇಳಿದರು. ಈ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸದಿರುವುದು ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ಪ್ರತಿಬಿಂಬವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇನ್ನೂ, ಈ ಬಜೆಟ್‌ನಲ್ಲಿ ಯುವಕರ ಹಿತಾಸಕ್ತಿಗೆ ಅಗತ್ಯವಾದ ಅಂಶಗಳಿಲ್ಲ. ಉದ್ಯೋಗ ಸೃಷ್ಟಿ ಕುರಿತು ಯಾವುದೇ ಸ್ಪಷ್ಟ ಯೋಜನೆಗಳು ಅಥವಾ ನೀತಿಗಳನ್ನು ಪ್ರಕಟಿಸಿಲ್ಲ. ಯುವಜನತೆಗೆ ಭರವಸೆ ನೀಡುವಂತಹ ಅಂಶಗಳಿಲ್ಲದ ಬಜೆಟ್ ಇದಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...