ರಮೇಶ ಕತ್ತಿ ವಿರುದ್ಧ ವಾಲ್ಮೀಕಿ ಸಮುದಾಯದ ಆಕ್ರೋಶ, ಬಂಧನಕ್ಕೆ ಆಗ್ರಹ : ಅ.24ಕ್ಕೆ ಬೆಳಗಾವಿ ಬಂದ್ ಎಚ್ಚರಿಕೆ

Date:

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಮಾಜಿ ಸಂಸದ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ, ನಗರದ ವಾಲ್ಮೀಕಿ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು.

- Advertisement -

ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ರಮೇಶ ಕತ್ತಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕತ್ತಿಯವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ವಾಲ್ಮೀಕಿ ಸಮುದಾಯ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ತಳವಾರ ಅವರು ಮಾತನಾಡಿ, “ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಶೋಷಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದು ಅಕ್ಷಮ್ಯ. ವಾಲ್ಮೀಕಿ ಸಮುದಾಯದ ಗೌರವಕ್ಕೆ ಧಕ್ಕೆಯುಂಟುಮಾಡಿದ ರಮೇಶ ಕತ್ತಿಗೆ ಮುಂದಿನ ದಿನಗಳಲ್ಲಿ ಜನಪ್ರತಿಕ್ರಿಯೆ ನೀಡಲಾಗುತ್ತದೆ,” ಎಂದು ಎಚ್ಚರಿಕೆ ನೀಡಿದರು.

ಅವರು ಮುಂದುವರಿಸಿದರು, “ರಮೇಶ ಕತ್ತಿಯ ಹೇಳಿಕೆಯಿಂದ ಸಮುದಾಯಗಳಲ್ಲಿ ಸಂಘರ್ಷ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಅವರನ್ನು ಬಂಧಿಸದಿದ್ದರೆ, ಅಕ್ಟೋಬರ್ 24ರಂದು ಬೆಳಗಾವಿ ಬಂದ್ ನೀಡಲಾಗುತ್ತದೆ. ಈ ಬಂದ್‌ಗೆ ಹಿಂದುಳಿದ ವರ್ಗಗಳ ವಿವಿಧ ಸಂಘಟನೆಗಳು ಬೆಂಬಲ ನೀಡಲಿವೆ,” ಎಂದರು.

ಈ ಪ್ರತಿಭಟನೆಯಲ್ಲಿ ಮುಖಂಡರಾದ ದಿನೇಶ ಬಾಗಡೆ, ಮಹೇಶ ಶೀಗಿಹಳ್ಳಿ, ಸುರೇಶ ಗವನ್ನವರ, ಪಾಂಡುರಂಗ ನಾಯಿಕ, ಸಂಜಯ ನಾಯಿಕ, ಪರಶುರಾಮ ಠಾಣಾ, ಮಲಗೌಡ ಪಾಟೀಲ, ಸಿದ್ದು ಸುಣಗಾರ, ಮಂಜುನಾಥ ಚಿಕ್ಕಲದಿನ್ನಿ, ಅಂಜನಕುಮಾರ ಗಂಡಗುದರಿ ಸೇರಿದಂತೆ ಅನೇಕರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...