ಬೆಳಗಾವಿ | ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ : ಸಚಿವ ಪ್ರಿಯಾಂಕ್‌ ಖರ್ಗೆ

Date:

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -

ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಚಿತ್ತಾಪುರ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಹಲ್ಲೆ ಆರೋಪ ಸತ್ಯ ಬಯಲಾಗಿದೆ.‌ ಅಪಘಾತದ‌ ಘಟನೆಯನ್ನು‌ ಹಲ್ಲೆ ಎಂದು ಕಥೆ ಕಟ್ಟಿದ್ದು ಪೊಲೀಸ್ ತನಿಖೆಯಿಂದ ಹೊರ ಬಂದಿದೆ. ಮಣಿಕಂಠ ರಾಠೋಡ್‌ ನನ್ನು ಸಮರ್ಥಿಸಿಕೊಂಡು ನಾನೇ ಹಲ್ಲೆ ಮಾಡಿದ್ದೇನೆಂದು ನೇರವಾಗಿ ನನ್ನ ವಿರುದ್ಧ ಆರೋಪಿಸಿ ನನ್ನ ರಾಜಿನಾಮೆಗೂ ಒತ್ತಾಯಿಸಿದ ವಿಪಕ್ಷ ನಾಯಕ ಆರ್.‌ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜಿನಾಮೆ ಕೊಡ್ತಾರಾ? ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಈ ಹಲ್ಲೆಗೆ ನೇರವಾಗಿ ಹಾಲಿ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿ ಎಂದು ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಕಾನೂನು‌ ಸುವ್ಯವಸ್ಥೆ ಹದಗೆಟ್ಟಿದೆ. ಮಣಿಕಂಠ ರಾಠೋಡ್ ಜೀವಕ್ಕೆ ಹಾನಿಯಾದರೆ ಅದಕ್ಕೆ ಪ್ರಿಯಾಂಕ್ ಖರ್ಗೆ ನೇರ ಹೊಣೆ ಆರೋಪಿಸಿದ್ದರು. ನನ್ನ ರಾಜಿನಾಮೆಗೂ ಒತ್ತಾಯಿಸಿದ್ದರು. ಈಗ ಸತ್ಯ ಬಯಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಮಣಿಕಂಠ ರಾಠೋಡ್‌ ಹಾಗೂ ಬಿಜೆಪಿ ನಾಯಕರ ಮೇಲೆ ಮಾನನಷ್ಟ ಮೊಕ್ಕದ್ದಮೆ ಹೂಡುತ್ತೇನೆ” ಎಂದು ಹೇಳಿದರು.

“ಖರ್ಗೆ ಕುಟುಂಬ‌‌ ನಾಶ ಮಾಡ್ತೇನೆ, ಪ್ರಿಯಾಂಕ್ ಖರ್ಗೆಯನ್ನು ಶೂಟ್ ಮಾಡ್ತೇನೆ ಎಂದು ಹೇಳಿದ್ದವರಿಗೆ ಬೆಂಬಲ ‌ಕೊಡ್ತಿರಾ? ಬಿಜೆಪಿ ಟಿಕೆಟ್‌ ಕೊಡ್ತೀರಾ? ಇದರಿಂದ ನಿಮ್ಮ ವರ್ಚಸ್ಸು ಕಡಿಮೆಯಾಗುತ್ತದೆ. ನನ್ನ ವಿರುದ್ಧ ಹೇಳಿಕೆ ಕೊಡುವಾಗ ಜಾಗರೂಕತೆಯಿಂದ ಕೊಡಿ ಇಲ್ಲಾಂದ್ರೆ ಕಾನೂನು ಪ್ರಕಾರ ನೋಡಿಕೊಳ್ಳುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

“ನನ್ನ ಸಹನೆ ಪರೀಕ್ಷಿಸಬೇಡಿ. ಬುದ್ದ, ಬಸವ ತತ್ವದ ಜೊತೆಗೆ ಅಂಬೇಡ್ಕರ್ ‌ಹೋರಾಟದ ಗುಣ ಇದೆ. ಸುಳ್ಳು ಆರೋಪ ಮಾಡಬೇಡಿ. ಹಕ್ಕುಚ್ಯುತಿ ಮಂಡನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...