ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ತನಿಖೆ ಆರಂಭಿಸಿದ ಸಿಐಡಿ

Date:

ಬೆಳಗಾವಿ ತಾಲೂಕಿನ ಹೊಸವಂಟಮೂರಿಯಲ್ಲಿ ಗ್ರಾಮದ ಯುವಕ-ಯುವತಿ ಪ್ರೀತಿಸಿ, ಊರು ತೊರೆದಿದ್ದಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಸಿಐಡಿ ತನಖೆಗೆ ವಹಿಸಲಾಗಿದೆ. ಡಿಐಜಿ ಸುಧೀರಕುಮಾರ್ ರೆಡ್ಡಿ ನೇತೃತ್ವದ ಸಿಐಡಿ ತಂಡ ಸೋಮವಾರ ತನಿಖೆ ಆರಂಭಿಸಿದೆ.

- Advertisement -

ಬೆಳಗಾವಿಗೆ ತೆರಳಿರುವ ತಂಡ ಸಂತ್ರಸ್ತ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದೆ. ಆಕೆಯ ಸಂಬಂಧಿಗಳಿಂದ ಮಾಹಿತಿ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಡಿಸೆಂಬರ್ 10ರ (ಭಾನುವಾರ) ರಾತ್ರಿ ಊರು ಬಿಟ್ಟು ಹೋಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ ಆತನ ತಾಯಿಯನ್ನು ಮನೆಯಿಂದ ಹೊರಗೆಳೆದು, ಬೆತ್ತಲೆಗೊಳಿಸಿ ಹಲ್ಲೆ ಮಾಡಿತ್ತು. ಘಟನೆ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್‌, ‘ಇದು ದುಶ್ಯಾಸರ ರಾಜ್ಯ. ಮಹಿಳೆಗೆ ಅಗತ್ಯ ಚಿಕಿತ್ಸೆ ಮತ್ತು ಕೌನ್ಸಲಿಂಗ್’ ಮಾಡಿಸಬೇಕು ಎಂದು ನಿರ್ದೇಶಿಸಿತ್ತು.

ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿದ್ದರು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಶನಿವಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ, ಬೆಳಗಾವಿಗೆ ತೆರಳಿರುವ ಸಿಐಡಿ ತಂಡ ತನಿಖೆ ಆರಂಭಿಸಿದೆ.

ಇನ್ನೊಂದೆಡೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲಕುಮಾರ್ ಮೀನಾ ಕೂಡ ಬೆಳಗಾವಿಗೆ ತೆರಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...