ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ ಪುರುಷರ ವಶ!

Date:

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪಗಳಿವೆ. ಪಂಚಾಯಿತಿ ಸಭೆಗಳು, ಅಧಿಕಾರಿಗಳೊಂದಿಗಿನ ವ್ಯವಹಾರಗಳು ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಿಳೆಯರ ಬದಲಿಗೆ ಮನೆಯ ಪುರುಷರೇ ಮುಂಚೂಣಿಯಲ್ಲಿರುವುದು ಕಂಡುಬರುತ್ತದೆ.

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ವರ್ಗ ಮತ್ತು ಜಾತಿವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ದಶಕದ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ನಿರೀಕ್ಷೆ ಮೂಡಿದ್ದು, ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಈ ನಡುವೆ ಮಹಿಳೆಯರಿಗೆ ಶೇ.50ರಷ್ಟು ಸ್ಥಾನಗಳನ್ನು ಮೀಸಲಿಟ್ಟಿರುವುದು ಗ್ರಾಮೀಣ ಮಹಿಳೆಯರ ರಾಜಕೀಯ ಪಾಲ್ಗೊಳ್ಳುವಿಕೆಗೆ ಮಹತ್ವದ ಅವಕಾಶ ಕಲ್ಪಿಸಿದೆ. ಆದರೆ, ಈ ಮೀಸಲಾತಿಯಿಂದ ಮಹಿಳೆಯರಿಗೆ ನಿಜವಾಗಿಯೂ ಅಧಿಕಾರ ಸಿಗುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ.

- Advertisement -

ಮಹಿಳೆಯರಿಗೆ ರಾಜಕೀಯದಲ್ಲಿ ಅವಕಾಶ ಕಲ್ಪಿಸುವುದು ಸಂವಿಧಾನದ ಆಶಯವನ್ನು ಸಾಕಾರಗೊಳಿಸುವ ಮಹತ್ವದ ಹೆಜ್ಜೆ. ಆದರೆ, ಚುನಾವಣೆಯಲ್ಲಿ ಗೆದ್ದು ಸದಸ್ಯೆಯರು, ಅಧ್ಯಕ್ಷೆಯರು ಹಾಗೂ ಉಪಾಧ್ಯಕ್ಷೆಯರಾಗುವ ಮಹಿಳೆಯರೇ ಸ್ವತಂತ್ರವಾಗಿ ನಿರ್ಧಾರ ಕೈಗೊಂಡು ಆಡಳಿತ ನಡೆಸುತ್ತಾರೆಯೇ ಅಥವಾ ಅವರ ಹೆಸರಿನಲ್ಲಿ ಮನೆಯ ಪುರುಷರೇ ಅಧಿಕಾರ ಚಲಾಯಿಸುತ್ತಾರೆಯೇ ಎಂಬುದನ್ನು ಗಮನಿಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪಗಳಿವೆ. ಪಂಚಾಯಿತಿ ಸಭೆಗಳು, ಅಧಿಕಾರಿಗಳೊಂದಿಗಿನ ವ್ಯವಹಾರಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಿಳೆಯರ ಬದಲಿಗೆ ಮನೆಯ ಪುರುಷರೇ ಮುಂಚೂಣಿಯಲ್ಲಿರುವುದು ಕಂಡುಬರುತ್ತದೆ.

ಮಹಿಳೆಯರು ಚುನಾವಣೆಯಲ್ಲಿ ಗೆದ್ದು ಅಧಿಕಾರ ಸ್ವೀಕರಿಸಿದ ಬಳಿಕವೂ ಸ್ವತಂತ್ರವಾಗಿ ಮಾತನಾಡಲು ಮತ್ತು ನಿರ್ಧಾರ ಕೈಗೊಳ್ಳಲು ಅವಕಾಶವಿಲ್ಲದಿದ್ದರೆ ಮೀಸಲಾತಿಯ ಉದ್ದೇಶ ಈಡೇರಿದಂತಾಗುವುದಿಲ್ಲ. ಮಹಿಳೆಯ ಹೆಸರಿನಲ್ಲಿ ಪುರುಷರೇ ಆಡಳಿತ ನಡೆಸುವ ಪ್ರವೃತ್ತಿಗೆ ಕಡಿವಾಣ ಹಾಕುವುದು ಅಗತ್ಯ. ಮಹಿಳೆಯರು ರಾಜಕೀಯಕ್ಕೆ ಬರಬೇಕು, ಜನರ ಸಮಸ್ಯೆಗಳನ್ನು ಆಲಿಸಬೇಕು ಮತ್ತು ಗ್ರಾಮಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಮನೋಭಾವ ಕುಟುಂಬದಿಂದಲೇ ಆರಂಭವಾಗಬೇಕು.

ಈ ಕುರಿತು ಈ ದಿನ.ಕಾಮ್ ಜತೆ ಮಾತನಾಡಿದ ರೈತ ರೈತ ಸಂಘಟನೆಯ ಮಹಿಳಾ ಹೋರಾಟಗಾತಿ ಶಿವಲೀಲಾ ಮಿಸಾಳೆ, “ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಇದ್ದರೂ, ಅವರ ಹೆಸರಿನಲ್ಲಿ ಪುರುಷರೇ ಆಡಳಿತ ನಡೆಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರು ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರುತ್ತಿದ್ದಾರೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ದೊರೆತಿದ್ದರೂ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಗುತ್ತಿಲ್ಲ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ರಾಜಕಾರಣ ಮಾಡಲು ಸಮರ್ಥರಲ್ಲ ಎಂಬ ತಪ್ಪು ಕಲ್ಪನೆ ಇನ್ನೂ ಇದೆ. ಇದೇ ಮನೋಭಾವದಿಂದ ಮಹಿಳಾ ಪ್ರತಿನಿಧಿಗಳ ಬದಲಿಗೆ ಪುರುಷರು ಅಧಿಕಾರ ಚಲಾಯಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ” ಎಂದರು.

“ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥವಾಗಿ ಕಾರ್ಯನಿರ್ವಹಿಸುವ ಶಕ್ತಿ ಹೊಂದಿದ್ದಾರೆ. ಆದ್ದರಿಂದ, ಚುನಾವಣೆಯಲ್ಲಿ ಆಯ್ಕೆಯಾದ ಮಹಿಳಾ ಪ್ರತಿನಿಧಿಗಳೇ ಸ್ವತಂತ್ರವಾಗಿ ನಿರ್ಧಾರ ಕೈಗೊಂಡು ಆಡಳಿತ ನಡೆಸುವಂತಾಗಬೇಕು. ಮಹಿಳೆಯರ ಹೆಸರಿನಲ್ಲಿ ಪುರುಷರು ಅಧಿಕಾರ ಚಲಾಯಿಸುವ ಪ್ರವೃತ್ತಿಗೆ ಕಡಿವಾಣ ಹಾಕಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ಮಹಿಳಾ ಮೀಸಲಾತಿಯ ನಿಜವಾದ ಉದ್ದೇಶ ಈಡೇರಲು ಸಾಧ್ಯ” ಎಂದು ಶಿವಲೀಲಾ ಮಿಸಾಳೆ ತಿಳಿಸಿದರು.

4,785 ಸ್ಥಾನಗಳಿಗೆ ಜನಪ್ರತಿನಿಧಿಗಳ ಆಯ್ಕೆ

ರಾಜ್ಯದ 239 ತಾಲೂಕು ಪಂಚಾಯಿತಿಗಳು ಹಾಗೂ 31 ಜಿಲ್ಲಾ ಪಂಚಾಯಿತಿಗಳ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆ ಚುರುಕುಗೊಳ್ಳುವ ನಿರೀಕ್ಷೆಯಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, 239 ತಾಲೂಕು ಪಂಚಾಯಿತಿಗಳ ಒಟ್ಟು 3,656 ಸ್ಥಾನಗಳ ಪೈಕಿ 1,905 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಅದೇ ರೀತಿ, 31 ಜಿಲ್ಲಾ ಪಂಚಾಯಿತಿಗಳ 1,129 ಸ್ಥಾನಗಳ ಪೈಕಿ 571 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಒಟ್ಟಾರೆ 4,785 ಸ್ಥಾನಗಳಿಗೆ ಜನಪ್ರತಿನಿಧಿಗಳ ಆಯ್ಕೆ ನಡೆಯಬೇಕಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ಕೊನೆಯದಾಗಿ 2016ರ ಫೆಬ್ರವರಿ 20ರಂದು ಚುನಾವಣೆ ನಡೆದಿದ್ದು, ಫೆಬ್ರವರಿ 23ರಂದು ಫಲಿತಾಂಶ ಪ್ರಕಟವಾಗಿತ್ತು. ಐದು ವರ್ಷಗಳ ಅವಧಿ 2021ರಲ್ಲಿ ಪೂರ್ಣಗೊಂಡಿದ್ದರೂ ವಿವಿಧ ಕಾರಣಗಳಿಂದ ಚುನಾವಣೆಗಳು ವಿಳಂಬವಾಗಿದ್ದವು. ಇದೀಗ ಮೀಸಲಾತಿ ಪ್ರಕಟಣೆಯಿಂದ ಚುನಾವಣೆಯ ನಿರೀಕ್ಷೆ ಹೆಚ್ಚಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯರಿಗೆ 45 ಸ್ಥಾನ

  • ಬೆಳಗಾವಿ ಜಿಲ್ಲೆಯ 90 ಜಿಲ್ಲಾ ಪಂಚಾಯಿತಿ ಸ್ಥಾನಗಳ ಪೈಕಿ 45 ಸ್ಥಾನಗಳನ್ನು ಮಹಿಳೆಯರಿಗೆ, ಉಳಿದ 45 ಸ್ಥಾನಗಳನ್ನು ಪುರುಷರಿಗೆ ಮೀಸಲಿಡಲಾಗಿದೆ.
  • ಪುರುಷರ 45 ಸ್ಥಾನಗಳ ಪೈಕಿ ಅನುಸೂಚಿತ ಜಾತಿಗೆ 11, ಅನುಸೂಚಿತ ಪಂಗಡಕ್ಕೆ 7, ಹಿಂದುಳಿದ ವರ್ಗ-ಎಗೆ 22 ಹಾಗೂ ಹಿಂದುಳಿದ ವರ್ಗ-ಬಿಗೆ 5 ಸ್ಥಾನಗಳನ್ನು ಮೀಸಲಿಡಲಾಗಿದೆ.
  • ಮಹಿಳೆಯರ 45 ಸ್ಥಾನಗಳ ಪೈಕಿ ಅನುಸೂಚಿತ ಜಾತಿಗೆ 6, ಅನುಸೂಚಿತ ಪಂಗಡಕ್ಕೆ 4, ಹಿಂದುಳಿದ ವರ್ಗ-ಎಗೆ 11, ಹಿಂದುಳಿದ ವರ್ಗ-ಬಿಗೆ 3 ಹಾಗೂ ಸಾಮಾನ್ಯ ವರ್ಗಕ್ಕೆ 21 ಸ್ಥಾನಗಳನ್ನು ಮೀಸಲಿಡಲಾಗಿದೆ.

ಮಹಿಳಾ ಮೀಸಲಾತಿಯಿಂದ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ದೊರೆಯುವ ನಿರೀಕ್ಷೆಯಿದೆ. ಈಗಾಗಲೇ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಆಕಾಂಕ್ಷಿಗಳ ಲೆಕ್ಕಾಚಾರ ಬದಲಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ, ಕ್ಷೇತ್ರವಾರು ಸಾಮಾಜಿಕ ಸಮೀಕರಣ ಹಾಗೂ ಟಿಕೆಟ್ ಹಂಚಿಕೆ ಕುರಿತು ಚರ್ಚೆಗಳು ಜೋರಾಗಿವೆ. ಆದರೆ, ಮಹಿಳೆಯರಿಗೆ ಟಿಕೆಟ್ ನೀಡುವುದರಲ್ಲೇ ರಾಜಕೀಯ ಪಕ್ಷಗಳ ಜವಾಬ್ದಾರಿ ಮುಗಿಯುವುದಿಲ್ಲ. ಆಯ್ಕೆಯಾದ ಬಳಿಕ ಅವರು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸುವುದೂ ಅಷ್ಟೇ ಮುಖ್ಯ.

ನಿಯಮ ಉಲ್ಲಂಘನೆಗೆ ಕ್ರಮ ಅಗತ್ಯ

ಮಹಿಳಾ ಪ್ರತಿನಿಧಿಗಳ ಪರವಾಗಿ ಅವರ ಕುಟುಂಬದ ಸದಸ್ಯರು ಅನಧಿಕೃತವಾಗಿ ಅಧಿಕಾರ ಚಲಾಯಿಸುವುದನ್ನು ತಡೆಯಲು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಚುನಾಯಿತ ಮಹಿಳಾ ಪ್ರತಿನಿಧಿಯ ಬದಲಿಗೆ ಮತ್ತೊಬ್ಬರು ಅಧಿಕೃತ ನಿರ್ಧಾರ ಕೈಗೊಳ್ಳುವುದು, ಸಭೆಗಳಲ್ಲಿ ಅನಧಿಕೃತವಾಗಿ ಪ್ರತಿನಿಧಿಸುವುದು ಅಥವಾ ಸರ್ಕಾರಿ ದಾಖಲೆಗಳ ದುರುಪಯೋಗದಲ್ಲಿ ತೊಡಗುವುದು ಕಂಡುಬಂದರೆ ಅನ್ವಯಿಸುವ ಕಾನೂನು ಮತ್ತು ನಿಯಮಗಳ ಪ್ರಕಾರ ತನಿಖೆ ನಡೆಸಬೇಕು.

ಮೀಸಲಾತಿ ಯಶಸ್ವಿಯಾಗುವುದು ಸ್ವತಂತ್ರ ಆಡಳಿತದಿಂದ

ಮಹಿಳಾ ಮೀಸಲಾತಿಯ ಉದ್ದೇಶ ಚುನಾವಣೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಗ್ರಾಮೀಣ ಆಡಳಿತದಲ್ಲಿ ಅವರ ಧ್ವನಿ ಕೇಳಿಸಬೇಕು, ಅಭಿಪ್ರಾಯಗಳಿಗೆ ಗೌರವ ಸಿಗಬೇಕು ಮತ್ತು ನಿರ್ಧಾರ ಕೈಗೊಳ್ಳುವ ಅಧಿಕಾರ ಅವರ ಕೈಯಲ್ಲಿರಬೇಕು. ಮಹಿಳೆಯರ ಬದಲಿಗೆ ಕುಟುಂಬದ ಪುರುಷರೇ ಆಡಳಿತ ನಡೆಸಿದರೆ ಮೀಸಲಾತಿಯಿಂದ ನಿರೀಕ್ಷಿಸಿದ ಸಾಮಾಜಿಕ ಬದಲಾವಣೆ ಸಾಧ್ಯವಾಗುವುದಿಲ್ಲ.

ಆದ್ದರಿಂದ, ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾದ ಸ್ಥಾನಗಳನ್ನು ಭರ್ತಿ ಮಾಡುವುದರ ಜೊತೆಗೆ, ಆಯ್ಕೆಯಾಗುವ ಮಹಿಳೆಯರು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುಕೂಲಕರ ವಾತಾವರಣ ನಿರ್ಮಿಸಬೇಕು. ಕುಟುಂಬದ ಸದಸ್ಯರು ಮಹಿಳಾ ಪ್ರತಿನಿಧಿಗಳ ನಿರ್ಧಾರಗಳಿಗೆ ಗೌರವ ನೀಡಬೇಕು. ರಾಜಕೀಯ ಪಕ್ಷಗಳು ಹಾಗೂ ಆಡಳಿತ ವ್ಯವಸ್ಥೆ ಮಹಿಳೆಯರ ನಾಯಕತ್ವವನ್ನು ಬೆಳೆಸಲು ಸಹಕರಿಸಬೇಕಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ, ಚಪ್ಪಲಿ ತೂರಾಟ

ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ (ಯುಪಿಸಿಸಿ) ಕಚೇರಿಯಲ್ಲಿ ತೀವ್ರ ಹೈಡ್ರಾಮಾ ನಡೆದಿದ್ದು,...

ರಾಜ್ಯದಲ್ಲಿ ಸ್ಟಿಂಗ್‌ ಆಪರೇಷನ್‌ ಸದ್ದು; ತನಿಖೆಗೆ ಒತ್ತಾಯಿಸಿದ ಸಿದ್ದರಾಮಯ್ಯ, ಹೆಚ್‌ಡಿಕೆ

ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ...

ಜಂತರ್ ಮಂತರ್ ಪ್ರವೇಶಿಸಲು ಯತ್ನ: ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ವಶಕ್ಕೆ

'ಜಂತರ್ ಮಂತರ್' ಅನ್ನು ಪ್ರತಿಭಟನಾ ತಾಣವಲ್ಲ ಎಂದು ಕೇಂದ್ರ ಸರ್ಕಾರ ಆದೇಶ...

ಪೆಹಲ್ಗಾಮ್‌ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಎಂದು ಸುಳ್ಳು ಆರೋಪ; ವ್ಯಕ್ತಿಗೆ ₹1.31 ಕೋಟಿ ವಂಚನೆ

ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ,...