ಅಂಗಾಂಗ ದಾನಕ್ಕಾಗಿ ಜೀರೊ ಟ್ರಾಫಿಕ್: ಬಾಗಲಕೋಟೆಯಿಂದ ಬೆಳಗಾವಿಗೆ ರೋಗಿಯ ರವಾನೆ

Date:

ಅಪಘಾತದಲ್ಲಿ ತಲೆಗೆ ತೀವ್ರ ಗಾಯವಾಗಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನಕ್ಕಾಗಿ ಬಾಗಲಕೋಟೆಯ ಹಾನಗಲ್‌ ಕುಮಾರೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಜೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಿದ ಮಾನವೀಯ ಘಟನೆ ಶನಿವಾರ ನಡೆಯಿತು.

- Advertisement -

ಮುಧೋಳ ತಾಲೂಕಿನ ಜುನ್ನೂರು ಗ್ರಾಮದ ದುಂಡಪ್ಪ ಕೆಂಚಕ್ಕನವರ (58) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದರು. ಅವರನ್ನು ಹಾನಗಲ್‌ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಪರಿಶೀಲನೆಯ ಬಳಿಕ ಅವರ ಮೆದುಳು ನಿಷ್ಕ್ರಿಯಗೊಂಡಿರುವುದು ದೃಢಪಟ್ಟಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ವೈದ್ಯರು ಅಂಗಾಂಗ ದಾನದ ಮಹತ್ವವನ್ನು ಕುಟುಂಬದವರಿಗೆ ಮನವರಿಕೆ ಮಾಡಿಕೊಟ್ಟ ಬಳಿಕ, ಕುಟುಂಬದವರು ಮಾನವೀಯತೆ ಮೆರೆದು ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದರು. ಅಂಗಾಂಗ ದಾನದ ಪ್ರಕ್ರಿಯೆ ಪೂರ್ಣಗೊಳಿಸಲು ರೋಗಿಯನ್ನು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಸ್ಥಳಾಂತರಿಸುವ ಅಗತ್ಯವಿದ್ದರಿಂದ ಆಸ್ಪತ್ರೆಯ ಪ್ರಾಜೆಕ್ಟ್ ಡೈರೆಕ್ಟರ್ ಡಾ.

Advertisements

ನವೀನ್ ಚರಂತಿಮಠ ಅವರು ಜಿಲ್ಲಾ ಪೊಲೀಸ್‌ ಇಲಾಖೆಯ ನೆರವು ಕೋರಿದರು.

ಬಾಗಲಕೋಟೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಾರ್ಥ ಗೊಯಲ್ ಅವರ ನಿರ್ದೇಶನದಂತೆ ಆಂಬುಲೆನ್ಸ್‌ಗೆ ಜೀರೊ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿ, ಯಾವುದೇ ಅಡೆತಡೆಯಿಲ್ಲದೆ ಸುರಕ್ಷಿತವಾಗಿ ಬೆಳಗಾವಿಗೆ ರವಾನಿಸಲಾಯಿತು.

ಕುಟುಂಬದವರು ಕಣ್ಣು ಹಾಗೂ ಲಿವರ್ ದಾನಕ್ಕೆ ಒಪ್ಪಿಗೆ ನೀಡಿದ್ದು, ಈ ಅಂಗಾಂಗ ದಾನದಿಂದ ಅಗತ್ಯವಿರುವ ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ಮೂಡಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಸಿಇ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು...