ಬೆಳಗಾವಿ | ಭರವಸೆಯಾಗಿಯೇ ಉಳಿದ ಗೋಕಾಕ್ ಫಾಲ್ಸ್‌ನಲ್ಲಿ ಗಾಜಿನ ಸೇತುವೆ ನಿರ್ಮಾಣದ ಭರವಸೆ

Date:

Advertisements

ಬೆಳಗಾವಿ ಜಿಲ್ಲೆಯ ಗೋಕಾಕ್‌ ಫಾಲ್ಸ್ ಎಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಗೋಕಾಕ್ ಫಾಲ್ಸ್ ಅಮೆರಿಕಾದ ನಯಾಗರ ಜಲಪಾತವನ್ನು ಹೊಲುವುದರಿಂದ ಇದನ್ನು ‘ಭಾರತದ ನಯಾಗರ ಜಲಪಾತ’ ಎಂದು ಕರೆಯಲಾಗುತ್ತದೆ.

ಗೋಕಾಕ್‌ ನಗರದಿಂದ 6 ಕಿಲೋ ಮೀಟರ್ ದೂರದಲ್ಲಿರುವ ಈ ಫಾಲ್ಸ್, ಘಟಪ್ರಭಾ ನದಿಯಿಂದ ಉಂಟಾಗುತ್ತದೆ. 180 ಅಡಿ ಎತ್ತರದಿಂದ ನೀರು ಧುಮ್ಮಿಕ್ಕುವ ನಯನ ಮನೋಹರ ದೃಶ್ಯವು ನೋಡುಗರ ಕಣ್ಮನ ಸೆಳೆಯುತ್ತದೆ.

ಜೂನ್ ತಿಂಗಳಿನಿಂದ ಡಿಸೆಂಬರ್ ತಿಂಗಳಿನವರೆಗೂ ಇಲ್ಲಿಗೆ ಪ್ರವಾಸಿಗರು ಭೇಟಿ ನೀಡಬಹುದು. ವಾರದಿಂದೀಚೆಗೆ ಹಿಡಕಲ್ ಡ್ಯಾಮ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ದಪ್ಪ ಕೆಂಪು ಕಂದು ಬಣ್ಣದ ಅಂಚನ್ನು ಉಜ್ಜುತ್ತಾ ಹರಿದು ನೀರು ಬರುತ್ತಿದೆ. ಇದು ಫಾಲ್ಸ್‌ನ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಿಸಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಫಾಲ್ಸ್ ನೋಡಲು ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗ ತೊಡಗಿದೆ.

Advertisements

ಐದಾರು ವರ್ಷಗಳ ಹಿಂದೆ ಸೇತುವೆ ಮೇಲೆ ನಿಂತು ಫಾಲ್ಸ್ ಸೌಂದರ್ಯವನ್ನು ಜನರು ನೋಡಿ ಕಣ್ತುಂಬಿಕೊಳ್ಳುತ್ತಿದ್ದರು. ಆದರೆ 2019ರಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ತೂಗು ಸೇತುವೆಗೆ ಹಾನಿಯಾಗಿ ಪ್ರವಾಸಿಗರಿಗೆ ಸಂಚಾರವನ್ನು ಬಂದ್ ಮಾಡಲಾಗಿದ್ದು, ಸದ್ಯ ಕಾರ್ಖಾನೆಯ ಸಿಬ್ಬಂದಿಗಳಿಗೆ ಮಾತ್ರ ಸೇತುವೆಯ ಮೇಲೆ ಸಂಚರಿಸಲು ಅವಕಾಶ ನೀಡಲಾಗಿದೆ.

ಗೋಕಾಕ್ ಫಾಲ್ಸ್ ಸೇತುವೆಯ ಇತಿಹಾಸ

1887ರಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಪರೀಕ್ಷಾರ್ಥವಾಗಿ ಜಲವಿದ್ಯುತ್ ಉತ್ಪಾದನೆ ಮಾಡಲಾಯಿತು. 1882ರಲ್ಲಿ ಘಟಕ ನಿರ್ಮಿಸಲಾಯಿತು. ಹಾಗೂ 1883 ದಿಲ್ಲಿ ದೂಪಧಾಳ ಬಳಿ ಅಣೆಕಟ್ಟು ನಿರ್ಮಿಸಲಾಯಿತು. ಅದರೊಂದಿಗೆ ಹತ್ತಿ ಮಿಲ್‌ಗೆ ಆಗಮಿಸುವ ಕಾರ್ಮಿಕರ ಸಂಚಾರಕ್ಕಾಗಿ ತೂಗು ಸೇತುವೆ ನಿರ್ಮಾಣವಾಯಿತು.

ಗಾಜಿನ ಸೇತುವೆ: ರಮೇಶ್ ಜಾರಕಿಹೊಳಿಯವರು ಕೊಟ್ಟ ಭರವಸೆ ಈಡೇರಿಲ್ಲ

2020ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯವರು ಗೋಕಾಕ್ ಫಾಲ್ಸ್‌ನಲ್ಲಿ 350 ಕೋಟಿ ವೆಚ್ಚದಲ್ಲಿ ನೀರು ಧುಮ್ಮಿಕ್ಕುವ ಸ್ಥಳದಿಂದ 20 ರಿಂದ 30 ಮೀಟರ್ ಅಂತರದಲ್ಲಿ ಅಮೆರಿಕಾದಲ್ಲಿನ ಗಾಜಿನ ಸೇತುವೆಯ ಮಾದರಿಯಲ್ಲಿ ಸೇತುವೆ ಹಾಗೂ ಯಾತ್ರಿ ನಿವಾಸ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು. ಇದಕ್ಕಾಗಿ ನೀಲನಕ್ಷೆಯು ಸಹ ತಯಾರಾಗಿದೆ ಎಂದು ಭರವಸೆ ಕೊಟ್ಟಿದ್ದರು. ಆದರೆ ಇಂದಿಗೂ ಆ ಭರವಸೆ ಈಡೇರಿಲ್ಲ ಎಂಬುದು ಮಾತ್ರ ವಾಸ್ತವ.

ನೀಲನಕ್ಷೆ ತಯಾರಾಗಿದೆ ಎಂದಿದ್ದ ರಮೇಶ್ ಜಾರಕಿಹೊಳಿಯವರೇ ಇದಕ್ಕೆ ಉತ್ತರಿಸಬೇಕಿದ್ದು, ಆ ನೀಲನಕ್ಷೆ ಏನಾಗಿದೆ ಎಂಬುದನ್ನು ತಿಳಿಸಬೇಕಿದೆ. ಗಾಜಿನ ಸೇತುವೆ ಈವರೆಗೆ ನಿರ್ಮಾಣವಾಗದಿರುವುದು ರಾಜ್ಯದ ಬೇರೆ ಬೇರೆ ಭಾಗಗಳಿಂದ ಗೋಕಾಕ್ ಫಾಲ್ಸ್ ನೋಡಲು ಬರುವ ಪ್ರವಾಸಿಗರಿಗೆ ನಿರಾಸೆಯನ್ನುಂಟು ಮಾಡಿದೆ.

ಸದ್ಯ ಹಳೆಯ ಸೇತುವೆ ಸಂಚಾರ ಬಂದ್ ಆಗಿರುವುದರಿಂದ ಇಲ್ಲಿಗೆ ಬರುವ ಪ್ರವಾಸಿಗರಿಗೆ ಬೇಸರ ಮೂಡಿಸಿದೆ. ಪ್ರವಾಸಿಗರು ದೂರದಿಂದಲೇ ಜಲಪಾತ ವೀಕ್ಷಣೆ ಮಾಡಿ ತೆರಳಬೇಕಾಗಿದೆ.

ನೈಸರ್ಗಿಕ ಸೌಂದರ್ಯದ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಫಾಲ್ಸ್ ಅಮೆರಿಕಾ ಮಾದರಿಯಲ್ಲಿ ಗಾಜಿನ ಸೇತುವೆ ನಿರ್ಮಾಣ ಮಾಡಿದರೆ ಜಲಪಾತಕ್ಕೆ ಮುಕುಟಮಣಿಯಂತಾಗುತ್ತದೆ. ಆದ್ದರಿಂದ, ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಮೇಶ್ ಜಾರಕಿಹೊಳಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ ಎಂಬುವುದು ಪ್ರವಾಸಿಗರ ಒತ್ತಾಯವಾಗಿದೆ.

ಸುನಿಲ್
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X