ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟೆಂಟ್‌ಗಳ ಸಮಾವೇಶ- “ಜ್ಞಾನ ಸಂಪನ್ನ-ಅರಿವಿನಿಂದ ವಿಕಾಸದೆಡೆಗೆ” ಕಾರ್ಯಕ್ರಮ ಜಿಲ್ಲೆಯ ಹೊಸಪೇಟೆಯಲ್ಲಿ ಏರ್ಪಡಿಸಲಾಗಿದೆ ಎಂದು ಸಿರಿಗೇರಿ ಪನ್ನರಾಜ್ ತಿಳಿಸಿದ್ದಾರೆ.
ಬಳ್ಳಾರಿ ನಗರದಲ್ಲಿ ಸುದ್ದಿಗೋಷಿಟಿ ನಡೆಸಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.12ರಂದು ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಪುವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ ಲಾಡ್ ಮತ್ತು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಎಲ್ಲ ಶಾಸಕರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ” ಎಂದು ಹೇಳಿದರು.
“ಹೊಸಪೇಟೆ ಶಾಸಕ ಎಚ್ ಆರ್ ಗವಿಯಪ್ಪ ಅಧ್ಯಕ್ಷತೆ ವಹಿಸುವರು. ಐಸಿಎಐ ಅಧ್ಯಕ್ಷ ಸಿಎ ಅನಿಕೇತ್ ಎಸ್ ತಲಾಟ ಮತ್ತು ಉಪಾಧ್ಯಕ್ಷ ಸಿ ಎ ರಂಜಿತ್ ಅಗರವಾಲ್ ಅವರೂ ಪಾಲ್ಗೊಳ್ಳುವರು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಗ್ರಾ. ಪಂಚಾಯಿತಿ ಸದಸ್ಯನಿಂದ ವ್ಯಕ್ತಿಗೆ ಅವಮಾನ
ಈ ಸಂದರ್ಭದಲ್ಲಿ ಸಂಸ್ಥೆಯ ಬಳ್ಳಾರಿ ಶಾಖೆಯ ಅಧ್ಯಕ್ಷ ನಾಗನಗೌಡ, ಉಪಾಧ್ಯಕ್ಷ ವೆಂಕಟ್ ನಾರಾಯಣ, ಕಾರ್ಯದರ್ಶಿಗಳಾದ ಪುರುಷೋತ್ತಮ ರೆಡ್ಡಿ, ಸ್ವಪ್ನ ಪ್ರಿಯ ಸೇರಿದಂತೆ ಇತರರು ಇದ್ದರು.
ವರದಿ : ರಾಧಾಕೃಷ್ಣ