ಬಳ್ಳಾರಿ | 2022-23 ಸಾಲಿನಲ್ಲಿ 615 ಶಿಶುಗಳ ಸಾವು; ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

Date:

2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಠಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಹಲವು ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

ಶಿಶುಗಳ ಸಾವಿನ ಪ್ರಮಾಣ‌ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಶಿಶುಗಳ ಸಾವಿಗೆ ತಾಯಂದಿರ ಆರೈಕೆಯಲ್ಲಿನ ವ್ಯತ್ಯಾಸವೂ ಒಂದು ಕಾರಣವಾಗಿದೆ. ಹಾಗೆ ಮಾತೃ ಪೂರ್ಣ ಯೋಜನೆ, ಮಾತೃವಂದನಾ, ಪೌಷ್ಠಿಕ ಆಹಾರ ವಿತರಣೆ ಇತರೆ ಯೋಜನೆಗಳು ಜಿಲ್ಲೆಯಲ್ಲಿ ವಿಫಲವಾಗಿವೆ. ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಹೆರಿಗೆ ವ್ಯವಸ್ಥೆ ಇಲ್ಲವೆಂಬ ಎಂಬ ಆರೋಪಗಳು ಕೇಳಿಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

2022-23ರಲ್ಲಿ ರಾಜ್ಯದಲ್ಲಿ 8,805 ಶಿಶುಗಳು ಮೃತಪಟ್ಟಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ 1371, ಮೈಸೂರು ಜಿಲ್ಲೆಯಲ್ಲಿ 669, ರಾಯಚೂರ ಜಿಲ್ಲೆಯಲ್ಲಿ 633, ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ

ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು ಬಳ್ಳಾರಿ ಜಿಲ್ಲಾಡಳಿತ ಮುಂದಾಗಿದ್ದು, “ಅಂಗನವಾಡಿ, ಆಶಾ ಕಾರ್ಯಕರ್ತರ ಮೂಲಕ ತಾಯಂದಿರಿಗೆ ತಲುಪಬೇಕಾದ ಪ್ರೋಟಿನ್‌ಗಳನ್ನು ಮುಟ್ಟಿಸಲು ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಯೋಜನೆಗಳು ತಲುಪಿಸಲು ವಿಫಲವಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...