ಬಳ್ಳಾರಿ | ಡಿಸೆಂಬರ್‌ಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Date:

ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.

- Advertisement -

ಜಿಲ್ಲಾಧಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಖಂಡ ಬಳ್ಳಾರಿಯಲ್ಲಿ ಈಗಾಗಲೇ 5 ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಈ ಬಾರಿ 67 ವರ್ಷಗಳ ಬಳಿಕ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳೆರಡೂ ಜಂಟಿಯಾಗಿ ಸಮ್ಮೇಳನ ನಡೆಸಲಿವೆ. ಡಿಸೆಂಬರ್ ತಿಂಗಳಲ್ಲಿ ವಾತಾವರಣ ಮತ್ತು ಹವಮಾನವು ಊತ್ತಮವಾಗಿರುವುದರಿಂದ ಆಯೋಜನೆಗೆ ಯಾವುದೇ ರೀತಿ ತೊಂದರೆಯಾಗುವುದಿಲ್ಲ. 3 ದಿನಗಳ ಕಾರ್ಯಕ್ರಮ ಆಯೋಜಿಸಲಾಗುವುದು. ಶಾಸಕರು ಹಾಗೂ ಸಚಿವರೊಂದಿಗೆ ಚರ್ಚಿಸಿ ಸಮ್ಮೇಳನದ ದಿನಾಂಕ ನಿರ್ಧರಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ಹಲವು ವರ್ಷಗಳ ಬಳಿಕ ಜಿಲ್ಲೆಯಲ್ಲಿ ಆಯೋಜನೆಯಾಗುತ್ತಿರುವ ಸಮ್ಮೇಳನಕ್ಕೆ ವಿಶೇಷ ಆಹ್ವಾನಿತರಾಗಿ ಬಳ್ಳಾರಿಯಲ್ಲಿ ಮೊದಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸರ್‌ ಥಾಮಸ್‌ ಮನ್ರೋ ಅವರ ಕುಟುಂಬಸ್ಥರು ಆಗಮಿಸಲಿದ್ದಾರೆ. ಇಂದಿನ ಪೀಳಿಗೆಗೆ ಮತ್ತು ಯುವಸಮುದಾಯಕ್ಕೆ ಕನ್ನಡ ಸಾಹಿತ್ಯದ ಬಗೆಗಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ” ಎಂದರು.

“ಈ ಸಮ್ಮೇಳನವು ಕನ್ನಡಿಗರ ಶೈಕ್ಷಣಿಕ ಮತ್ತು ಔದ್ಯೋಗಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮತ್ತು ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ್ದಾಗಲಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ. ಕನ್ನಡ ಅನ್ನದ ಭಾಷೆ ಆಗಬೇಕು. ಇದರ ಕುರಿತ ಮೌಲ್ಯಾಧಾರಿತ ಚರ್ಚೆಗಳು ನಡೆಯಲಿವೆ. ಹಾವೇರಿ ಸಮ್ಮೇಳನದಲ್ಲಿ ಕೈಗೊಂಡಿದ್ದ ಸಮಗ್ರ ಕನ್ನಡ ಭಾಷಾ ವಿಧೇಯಕ ಜಾರಿಯ ನಿರ್ಣಯವನ್ನು ಸರ್ಕಾರ ಸಾಕಾರಗೊಳಿಸಿದೆ” ಎಂದು ಹೇಳಿದರು.

ಇದನ್ನೂ ಓದಿ: ಬಳ್ಳಾರಿ | ನೋಟಿಸ್ ನೀಡದೆ ಮನೆ ತೆರವು; ಪ್ರತಿಭಟನೆ

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ ಜೆ ಶೋಭಾರಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಟೇಲ್ ಪಾಂಡು, ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...