ಬಳ್ಳಾರಿ | ಶಾಲಾ ಬಸ್‌ನಲ್ಲಿ ಬೆಂಕಿ; 50ಕ್ಕೂ ಹೆಚ್ಚು ಮಕ್ಕಳು ಪಾರು

Date:

Advertisements
  • ಶಾಲಾ ಬಸ್‌ ಎಂಜಿನ್‌ನಲ್ಲಿ ಆಕಸ್ಮಿಕ ಹೊಗೆ
  • ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ ಚಾಲಕ

ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಘಟನೆ ನಡೆದಿದ್ದು, ಸಿರಗುಪ್ಪದಿಂದ ತೆಕ್ಕಲಕೋಟೆಗೆ ತೆರಳುತ್ತಿದ್ದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ಹೊತ್ತಿ ಉರಿದಿದೆ.

ಮೊದಲಿಗೆ ಡೀಸೆಲ್ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಮಕ್ಕಳು ಬಸ್‌ ಚಾಲಕನಿಗೆ ತಿಳಿಸಿದ್ದಾರೆ. ಚಾಲಕ ಯಾಸೀನ್‌ ಕೂಡಲೇ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಎಲ್ಲ ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ್ದಾನೆ.

Advertisements
ಈ ಸುದ್ದಿ ಓದಿದ್ದೀರಾ?  ಚಿಕ್ಕಮಗಳೂರು | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 28ಕ್ಕೆ ಬೃಹತ್‌ ಪ್ರತಿಭಟನಾ ಸಮಾವೇಶ

ಮಕ್ಕಳು ಕೆಳಗೆ ಇಳಿಯುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದೆ. ವಿದ್ಯಾರ್ಥಿಗಳು, ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ.

ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಿಂದಿಸಿದ್ದಾರೆ. ಸಿರಗುಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X