ಬಳ್ಳಾರಿ | ನ.19ರವರೆಗೆ ಅಗ್ನಿವೀರ್ ನೇಮಕಾತಿ ರ‍್ಯಾಲಿ

Date:

ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್‌ 19ರವರೆಗೆ ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ.‌

- Advertisement -

ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 2025ರ ಜೂನ್ 30ರಿಂದ ಜುಲೈ 10ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು ವರ್ಗವಾರು ರ‍್ಯಾಲಿಗೆ ಆಹ್ವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಗ್ನಿವೀರ್ ಸಾಮಾನ್ಯ ಕರ್ತವ್ಯ (ಅಗ್ನಿವೀರ್ ಸಾಮಾನ್ಯ ಕರ್ತವ್ಯ ವರ್ಗಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು): ಬೆಂಗಳೂರು ಪ್ರಧಾನ ಕಚೇರಿಯ ಆರ್‌ಒ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಹಾಗೂ ವಿಜಯನಗರ.

ಅಗ್ನಿವೀರ ಸಾಮಾನ್ಯ ಡ್ಯೂಟಿ ಹೊರತುಪಡಿಸಿ ಒಂದೇ ವರ್ಗಕ್ಕೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು: (ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸö್ಮನ್ (10ನೇ) ಮತ್ತು ಅಗ್ನಿವೀರ್ (8ನೇ), ಬೆಂಗಳೂರು ಪ್ರಧಾನ ಕಚೇರಿಯ ಆರ್‌ಓ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳು.

ಇದನ್ನೂ ಓದಿ: ಬಳ್ಳಾರಿ | ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀ ರೋಗ ತಜ್ಞರ ನೇಮಕಕ್ಕೆ ಪ್ರಗತಿಪರರ ಆಗ್ರಹ

ಬಹು ವರ್ಗಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು: ಎಆರ್‌ಒ ಮಂಗಳೂರು ವ್ಯಾಪ್ತಿಯ ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು.ರ‍್ಯಾಲಿ ಎಲ್ಲಾ ಅಗ್ನಿವೀರ ವರ್ಗಗಳ ನೇಮಕಾತಿಗಾಗಿ ಆಯೋಜಿಸಲಾಗಿದೆ ವಯಸ್ಸು, ವಿದ್ಯಾರ್ಹತೆ ಹಾಗೂ ಇತರೆ ಅರ್ಹತಾ ವಿವರಗಳು ಜೆಐಎ ವೆಬ್‌ಸೈಟ್‌ನಲ್ಲಿ 2025ರ ಮಾರ್ಚ್ 12ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ ಇರುತ್ತವೆ.

ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವು www.joinindianarmy.nic.in ನಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರವೇಶಪತ್ರವನ್ನು ಅವರ ನೋಂದಾಯಿತ ಈ-ಮೇಲ್ ಐಡಿಗೆ ಕಳುಹಿಸಲಾಗುತ್ತದೆ. ಜೊತೆಗೆ Join Indian Army ವೆಬ್‌ಸೈಟ್ ನಲ್ಲಿಯೂ ಲಭ್ಯವಿರುತ್ತದೆ.

ಅಭ್ಯರ್ಥಿಗಳು ಯಾವುದೇ ದಲಾಲರು ಅಥವಾ ಮಧ್ಯವರ್ತಿಗಳ ಮೋಸಕ್ಕೆ ಒಳಗಾಗಬಾರದು. ಅಯ್ಕೆ ಸಂಪೂರ್ಣವಾಗಿ ಆನ್‌ಲೈನ್ ಪರೀಕ್ಷೆ ರ‍್ಯಾಲಿ ಸಮಯದಲ್ಲಿ ನಡೆಯುವ ಪರೀಕ್ಷೆಗಳು ಹಾಗೂ ಅಂತಿಮ ಮೆರುಗಿನ ಆಧಾರದ ಮೇಲೆ ಮಾತ್ರ ಆಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...