ಬಳ್ಳಾರಿ | ಸರ್ಕಾರಿ ವೈದ್ಯಕೀಯ ಕಾಲೇಜುಗಳ NRI ಕೋಟಾ ರದ್ದತಿಗೆ AIDSO ಆಗ್ರಹ

Date:

Advertisements

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿ ಮಾಡಿರುವ ಶೇ.15 NRI ಕೋಟಾ ರದ್ದುಪಡಿಲು ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

AIDSO ಮಾಜಿ ರಾಜ್ಯಾಧ್ಯಕ್ಷ ಡಾ. ಪ್ರಮೋದ್ ಮಾತನಾಡಿ, “2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 15ರಷ್ಟು ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರವು ವೈದ್ಯಕೀಯ ಶಿಕ್ಷಣದ ಕನಸು ಹೊತ್ತ ರಾಜ್ಯದ ಬಡ ವಿದ್ಯಾರ್ಥಿಗಳನ್ನು ಆತಂಕಕ್ಕೆ ತಳ್ಳಿದೆ. ಈಗಾಗಲೇ ಅಖಿಲ ಭಾರತ ಕೋಟಾದಡಿ ಶೇ.15 ಸೀಟುಗಳನ್ನು ನೀಡಲಾಗುತ್ತಿದೆ. ಎನ್‌ಆರ್‌ಐ ಕೋಟಾಗೆ ನೀಡಿದರೆ 200 ವಿದ್ಯಾರ್ಥಿಗಳ ಒಂದು ಬ್ಯಾಚಿನಲ್ಲಿ 140 ಸೀಟುಗಳು ಮಾತ್ರ ರಾಜ್ಯದ ವಿದ್ಯಾರ್ಥಿಗಳಿಗೆ ಉಳಿದಂತಾಗುತ್ತದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳು ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ಸ್ಥಾಪಿಸಲಾಗಿದೆ. ಶ್ರೀಮಂತ ಎನ್‌ಆರ್‌ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶವನ್ನು ಕಡಿತಗೊಳಿಸಿದಂತಾಗಿದೆ” ಎಂದರು.

ಇದನ್ನೂ ಓದಿ: ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

AIDSO ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, “ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ಸಮಯದಲ್ಲಿ, ಸರ್ಕಾರವು ಈ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯವನ್ನು ಸುಧಾರಿಸಲು ಆದ್ಯತೆ ನೀಡಬೇಕು. ಬೋಧಕವರ್ಗ ಮತ್ತು ಸೌಲಭ್ಯಗಳನ್ನು ಬಲಪಡಿಸುವುದು ನಿಜವಾದ ಅಗತ್ಯವಾಗಿದೆ. ಈ ಅಗತ್ಯಗಳನ್ನು ಪೂರೈಸಲು ಸರ್ಕಾರವು ಮುಂದಾಗಬೇಕು. ಸಂಪನ್ಮೂಲ ಕ್ರೋಢೀಕರಣದ ನೆಪದಲ್ಲಿ ಶ್ರೀಮಂತರಿಗೆ ಸೀಟುಗಳನ್ನು ಮಾರಾಟ ಮಾಡಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗದು. ಆದ್ದರಿಂದ ಸರ್ಕಾರಿ ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಂತೆ ಲಾಭಗಳಿಸುವ ಕೇಂದ್ರಗಳಾಗಿ ಪರಿವರ್ತಿಸುವ ಅಪಾಯಕಾರಿ ಹೆಜ್ಜೆಯಾದ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು” ಎಂದು AIDSO ಆಗ್ರಹಿಸುತ್ತದೆ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷೆ ಶಾಂತಿ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X